ಹಣ ಹಂಚಿಕೆ ಸಾಬೀತಾದರೇ ರಾಜಕೀಯ ನಿವೃತ್ತಿ: ಗೋವಿಂದ ಕಾರಜೋಳ

ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ, ನಾನು ಆರು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದಿಗೂ ಇಂತಹ ಕೆಲಸಮಾಡಿಲ್ಲ ಎಂದು ಹೇಳಿದ್ದಾರೆ.
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
Updated on

ಬೆಂಗಳೂರು: ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ, ನಾನು ಆರು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದಿಗೂ ಇಂತಹ ಕೆಲಸಮಾಡಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ  ಮತದಾರರಿಗೆ ನಾನು ಹಣ ಹಂಚಿಕೆ ಮಾಡಿದ್ದೇನೆ ಎಂದು ಸಾಬೀತಾದರೇ ರಾಜಕೀಯ ನಿವೃತ್ತಿ  ಪಡೆಯುವುದಾಗಿ ಸವಾಲು ಹಾಕಿದ್ದಾರೆ, ಯಾವುದೇ ಚುನಾವಣೆಯಲ್ಲೂ ನಾನು ಇಂತಹ ಕೆಲಸ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾಗವಾಡದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಕಾರಜೋಳ ವಿರುದ್ಧ ದೂರು ನೀಡಿದ್ದರು,  ಜೊತೆಗೆ ಕಾರಜೋಳ ಹಣ ಹಂಚುತ್ತಿರುವ ದೃಷ್ಯದ ವಿಡಿಯೋವನ್ನು ಕೂಡ ಆಯೋಗಕ್ಕೆ ಸಲ್ಲಿಸಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ಕಾರಜೋಳ್, ಕಾರಿಗೆ ಡಿಸೇಲ್ ಹಾಕಿಸಲು ಚಾಲಕನಿಗೆ ಹಣ ನೀಡುತ್ತಿದ್ದ ಅದನ್ನು ರೆಕಾರ್ಡ್ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com