ಅಕ್ರಮವಾಗಿ ಸಂಪತ್ತು ಗಳಿಸಿಲ್ಲ: ಚಾಮುಂಡೇಶ್ವರಿ ಬಳಿ ಪ್ರಮಾಣ ಮಾಡುತ್ತೇನೆ- ಲಕ್ಷ್ಮೀ ಹೆಬ್ಬಾಳ್ಕರ್ 

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ಸಂಪತ್ತನ್ನು ಅಕ್ರಮವಾಗಿ ಗಳಿಸಿಲ್ಲ , ಮಾಧ್ಯಮಗಳಲ್ಲಿ ಬಂದಿರುವಂತೆ ಸೌರ ವಿದ್ಯುತ್ ಸ್ಥಾವರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
Updated on

ಬೆಳಗಾವಿ: ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ  ಇಡಿ ವಿಚಾರಣೆ ಎದುರಿಸಿರುವ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ಸಂಪತ್ತನ್ನು ಅಕ್ರಮವಾಗಿ ಗಳಿಸಿಲ್ಲ , ಮಾಧ್ಯಮಗಳಲ್ಲಿ ಬಂದಿರುವಂತೆ ಸೌರ ವಿದ್ಯುತ್ ಸ್ಥಾವರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಅಕ್ರಮವಾಗಿ ಸಂಪತ್ತು ಗಳಿಸಿಲ್ಲ ಎಂದು ಚಾಮುಂಡೇಶ್ವರಿ ದೇವಿ ಬಳಿ ಪ್ರಮಾಣ ಮಾಡುವುದಾಗಿ ಅವರು ಹೇಳಿದ್ದಾರೆ. ಒಂದು ವೇಳೆ ತನ್ನ ಸಂಪತ್ತೆಲ್ಲಾ ಅಕ್ರಮದಿಂದ ಕೂಡಿದ್ದರೆ ಅದನ್ನು ರಾಜ್ಯದ ಬೊಕ್ಕಸಕ್ಕೆ ಹಸ್ತಾಂತರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. 

ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಸಿಬಿಐಗೆ ವರ್ಗಾಯಿಸಲಿದೆ ಎಂಬ ಪ್ರಶ್ನೆಯನ್ನು ನಿರಾಕರಿಸಿದ ಅವರು, ಇಂತಹ ವಿದ್ಯಮಾನಗಳ ಬಗ್ಗೆ ಗೊತ್ತಿಲ್ಲ ಎಂದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com