ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಪರಿಹಾರ ಕೊಟ್ಟಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ 

ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 

ಚಿಕ್ಕಮಗಳೂರು: ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಕಳಸದ ಎಸ್.ಕೆ.ಮೇಗಲ್,ಕಾರ್ಗದ್ದೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಚಂದ್ರೇಗೌಡ,ಚೆನ್ನಪ್ಪ ಗೌಡರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸತ್ತು ಹೋಗಿದೆ. ಇದು ಬೇಜಾವಾಬ್ದಾರಿ ಸರ್ಕಾರ ಹಾಗೂ ಜನ ವಿರೋಧಿ ಸರ್ಕಾರ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಅಂದರೆ ಈ ಸರ್ಕಾರವನ್ನು ಕಿತ್ತು ಎಸೆಯಬೇಕು ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com