ಕೇಂದ್ರದಿಂದ ನಯಾಪೈಸೆ ಕೂಡ ಬಂದಿಲ್ಲ, ಈಗ ಬಂದಿರುವುದು ಹಿಂದಿನ ಸರ್ಕಾರದಲ್ಲಾದ ನಷ್ಟಕ್ಕೆ ಪರಿಹಾರ: ಎಚ್ ಡಿ ದೇವೇಗೌಡ

ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಸುಮಾರು 38000 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ‌ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕೈವಾರ: ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಸುಮಾರು 38000 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ‌ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಶ್ರೀ ಕ್ಷೇತ್ರ ಕೈವಾರದಲ್ಲಿ ಚಿಂತಾಮಣಿ ಜೆಡಿಎಸ್ ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಅವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗ ನೀಡಿರುವ 1200 ಕೋಟಿ ರೂಪಾಯಿ ಪರಿಹಾರ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಕೊಡಗು, ಶಿವಮೊಗ್ಗ ಮತ್ತಿತರ ಕಡೆ ಉಂಟಾಗಿದ್ದ ನೆರೆ ಪರಿಹಾರದ ನಷ್ಟದ ಪರಿಹಾರವೇ ಹೊರತು ಈಗಿನ 38000 ಸಾವಿರ ಕೋಟಿ ನಷ್ಟದ ಪರಿಹಾರ ನೀಡಿಲ್ಲ ಎಂದು ಕೇಂದ್ರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಸಮರ್ಪಕ ಅನುದಾನದಕ್ಕಾಗಿ ಇದೇ ತಿಂಗಳ 10 ರಂದು ಬೆಂಗಳೂರಿನ ಗಾಂಧಿ ಪ್ರತಿಮೆಯಿಂದ ಫ್ರೀಡಂ ಪಾರ್ಕ್ ವರೆಗೆ ಸಾಂವಿಧಾನಿಕವಾಗಿ ಹೋರಾಟ ಮಾಡುವುದಾಗಿ ದೇವೇಗೌಡ ಎಚ್ಚರಿಸಿದರು. ಇದೇ ವೇಳೆ ತಮ್ಮ ಗತಕಾಲದ ರಾಜಕೀಯ ಜೀವನವನ್ನ ಮೆಲುಕು ಹಾಕಿದ ದೇವೇಗೌಡರು, ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರು ಪಕ್ಷದಿಂದ ಹೊರಗೆ ಹಾಕಿದಾಗ ಕೈವಾರ ಪುಣ್ಯಕ್ಷೇತ್ರದ ಅಭಿವೃದ್ಧಿಯ ಹರಿಕಾರ ಎಂ.ಎಸ್.ರಾಮಯ್ಯ ಅವರು ರಾಜಕೀಯ ಅಭಿವೃದ್ದಿಗೆ ಮಾಡಿದ ಆರ್ಥಿಕ ನೆರವನ್ನು ನೆನಪಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com