ಶ್ರೀರಾಮುಲು ಉಪ ಮುಖ್ಯಮಂತ್ರಿ ಆಗಬೇಕು: ಸೋಮಶೇಖರ ರೆಡ್ಡಿ

ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ  ಒತ್ತಾಯಿಸಿದ್ದಾರೆ. 
ಸೋಮಶೇಖರ ರೆಡ್ಡಿ
ಸೋಮಶೇಖರ ರೆಡ್ಡಿ
Updated on

ಬಳ್ಳಾರಿ: ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ  ಒತ್ತಾಯಿಸಿದ್ದಾರೆ. 

ನಗರದಲ್ಲಿಂದು ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಉಪ ಮುಖ್ಯಮಂತ್ರಿ ಆಗಬೇಕು ಜೊತೆಗೆ ಅವರಿಗೆರ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ನೀಡಿ ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ನೀಡಿರುವ ಬಳ್ಳಾರಿ ಉಸ್ತುವಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡಿದದ್ದರು.ಆದರೆ  ಸಚಿವ ಸಂಪುಟ ರಚನೆ ವೇಳೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡಿದೆ ಸಚಿವ ಸ್ಥಾನ ನೀಡಿರುವುದು ತಮಗೆ ತುಂಬಾ ಬೇಸರ ತರಿಸಿದೆ ಎಂದು ಶಾಸಕ ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com