ಬಿಜೆಪಿ ಸರ್ಕಾರ ಇನ್ನೂ ನಿದ್ರೆಯಲ್ಲಿದೆ: ಯಡಿಯೂರಪ್ಪ ಟೀಕಿಸಿದ ಸಿದ್ದು
ಬೆಂಗಳೂರು: ಪ್ರವಾಹ ಪರಿಹಾರ ಕುರಿತಂತೆ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯಗಳ ಫಲಿತಾಂಶ ಕೆಲ ದಿನಗಳ ಹಿಂದಷ್ಟೇ ಪ್ರಕಟಗೊಂಡಿದ್ದು, ಚುನಾವಣಾ ಫಲಿತಾಂಶವೇ ಪಕ್ಷದ ಕಾರ್ಯವೈಖರಿಗಳ ಬಗ್ಗೆ ಹೆಚ್ಚು ತಿಳಿಯುವಂತೆ ಮಾಡಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದರೂ, ಸರ್ಕಾರ ಮಾತ್ರ ಇನ್ನೂ ನಿದ್ರಿಸುತ್ತಿದೆ ಎಂದು ಹೇಳಿದ್ದಾರೆ.
ನೆರೆ ಪೀಡಿತರಿಗೆ ಪರಿಹಾರ ಆಗ್ರಹಿಸಿ ಶೀಘ್ರದಲ್ಲಿಯೇ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆ ಕುರಿತಂತೆ ಕಾಂಗ್ರೆಸ್ ನಿರ್ಧಾರ ಕೈಗೊಳ್ಳಲಿದೆ. ಶೀಘ್ರದಲ್ಲೇ ಪಾದಯಾತ್ರೆಗೆ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಡಿಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲಿಯೇ ಉನ್ನತ ಸ್ಥಾನವನ್ನು ನೀಡಲಾಗುತ್ತದೆ ಎಂಬ ವರದಿಗಳಿಗೆ ಉತ್ತರಿಸಿರುವ ಅವರು, ಇವೆಲ್ಲಾ ವದಂತಿಗಳಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ