ಯಾವ ತನಿಖೆಗೂ ಹೆದರುವುದಿಲ್ಲ- ಎಚ್. ಡಿ. ಕುಮಾರಸ್ವಾಮಿ

ತಮ್ಮ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕದ್ದಾಲಿಕೆ, ಐಎಂಎ ಹಗರಣ ಸೇರಿದಂತೆ ಮತ್ತಿತರ ಪ್ರಕರಣಗಳ ತನಿಖೆಗೆ ಹೆದರುವುದಿಲ್ಲ  ರಕ್ಷಣೆ ನೀಡಿ ಎಂದು ಯಾರ ಹತ್ತಿರವೂ ಭಿಕ್ಷೆ ಬೇಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ
Updated on

ಹುಬ್ಬಳ್ಳಿ:  ತಮ್ಮ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕದ್ದಾಲಿಕೆ, ಐಎಂಎ ಹಗರಣ ಸೇರಿದಂತೆ ಮತ್ತಿತರ ಪ್ರಕರಣಗಳ ತನಿಖೆಗೆ ಹೆದರುವುದಿಲ್ಲ  ರಕ್ಷಣೆ ನೀಡಿ ಎಂದು ಯಾರ ಹತ್ತಿರವೂ ಭಿಕ್ಷೆ ಬೇಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ.‌ ಪರಿಹಾರ ಕಾರ್ಯಗಳಿಗೆ ಸರ್ಕಾರಕ್ಕೆ ಸ್ವಲ್ಪ ಕಾಲಾವಕಾಶ ನೀಡಬೇಕು. ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ. ಆದರೆ ಸಚಿವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ  ಎಂದರು.

ರೈತರ ಸಾಲಮನ್ನಾ ಮಾಡುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಇಲ್ಲದಿದ್ದರೆ ಮತ್ತಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಿದರು. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಮೈತ್ರಿ ಸರ್ಕಾರದಲ್ಲಿ 800 ಕೋಟಿ ಹೊಂದಿಸಬೇಕಾಯಿತು. ಯಾರು ಯಾವ ಸಂದರ್ಭದಲ್ಲಿ ಏನು ಮಾತನಾಡಿದ್ದಾರೆ ಎಂಬ ಅರಿವು ನನಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com