ರಾಜಕೀಯ ವಿರೋಧಿಗಳಿಗೆ ಸಿದ್ದರಾಮಯ್ಯರಿಂದ ದೀಪಾವಳಿ ಸಂದೇಶ!

ಡಿಕೆಶಿ ಜೆಡಿಎಸ್ ಬಾವುಟ ಹಿಡಿದ ಸಂಬಂಧ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮನೆಯಲ್ಲಿ ನಡೆದಿರುವ ಖಾಸಗಿ ಮಾತುಕತೆಯ ವಿಡಿಯೋ  ವೈರಲ್ ಆಗುತ್ತಿದ್ದಂತೆ ಬಿಜೆಪಿ  ನಾಯಕರ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಡಿಕೆಶಿ ಜೆಡಿಎಸ್ ಬಾವುಟ ಹಿಡಿದ ಸಂಬಂಧ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಮನೆಯಲ್ಲಿ ನಡೆದಿರುವ ಖಾಸಗಿ ಮಾತುಕತೆಯ ವಿಡಿಯೋ  ವೈರಲ್ ಆಗುತ್ತಿದ್ದಂತೆ ಬಿಜೆಪಿ  ನಾಯಕರ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ.ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯಾತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ.

ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ದನಾಗಿರುವ ನಾನು ಅಂಬೇಡ್ಕರ್ , ಗಾಂಧೀಜಿ , ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯಾತೀತ. ಇದು ನನ್ನ ಜಾತಿ ವಿನಾಶದ ಹಾದಿ ನಿಮ್ಮದು ಯಾವ ಹಾದಿ ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ. ವೈಯಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ. ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ರಾಜಕೀಯ ವಿರೋಧಿಗಳಿಗೆ ಧನ್ಯವಾದ ಹೇಳಿವುದಾಗಿ ತಿಳಿಸಿದ್ದಾರೆ.

ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ರಾಜಕೀಯ ವಿರೋಧಿಗಳಿಗೆ ಇದೇ ತಮ್ಮ ದೀಪಾವಳಿಯ ಸಂದೇಶ ಎಂದು ಸತ್ಯಮೇವ ಜಯತೇ ಎಂಬ ಹ್ಯಾಷ್ ಟಾಗ್ ನಲ್ಲಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com