ಗಣೇಶ್ ಹಬ್ಬದ ದಿನವೇ ಗಳಗಳನೆ ಅತ್ತ ಕನಕಪುರ ಬಂಡೆ!

ಎಂತಹ ಸಂದರ್ಭದಲ್ಲೂ ಹೆಬ್ಬಂಡೆಯಂತೆ ದೃಢವಾಗಿ ನಿಲ್ಲುತ್ತಿದ್ದ ಕಾಂಗ್ರೆಸ್ ಟ್ರಬಲ್ ಶೂಟರ್ ಖ್ಯಾತಿಯ ಮಾಜಿ ಸಚಿವ ಡಿಕೆ ಶಿವಕುಮಾರ್ ಗಣೇಶ್ ಹಬ್ಬದ ದಿನವೇ ಕಣ್ಣೀರು ಹಾಕಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ನವದೆಹಲಿ: ಎಂತಹ ಸಂದರ್ಭದಲ್ಲೂ ಹೆಬ್ಬಂಡೆಯಂತೆ ದೃಢವಾಗಿ ನಿಲ್ಲುತ್ತಿದ್ದ ಕಾಂಗ್ರೆಸ್ ಟ್ರಬಲ್ ಶೂಟರ್ ಖ್ಯಾತಿಯ ಮಾಜಿ ಸಚಿವ ಡಿಕೆ ಶಿವಕುಮಾರ್ ಗಣೇಶ್ ಹಬ್ಬದ ದಿನವೇ ಕಣ್ಣೀರು ಹಾಕಿದ್ದಾರೆ.

ಜಾರಿ ನಿರ್ದೇಶನಾಲಯ(ಇಡಿ) ಕಳೆದ ಮೂರು ದಿನಗಳಿಂದ ಡಿಕೆ ಶಿವಕುಮಾರ್ ವಿಚಾರಣೆ ನಡೆಸುತ್ತಿದ್ದಾರೆ. ಇಂದು ನಮ್ಮ ತಂದೆಗೆ ಪೂಜೆ ಮಾಡಬೇಕಿತ್ತು. ಆದರೆ ನನ್ನ ಬಿಜೆಪಿ ಸ್ನೇಹಿತರು ಅಧಿಕಾರದ ಮುಖಾಂತರ ಕೊಟ್ಟಿಲ್ಲ. ನನಗೆ ದುಃಖ ಯಾಕೆ ಆಗುತ್ತಿದೆ ಎಂದರೆ ಇವತ್ತು ತಂದೆ ಹಾಗೂ ಹಿರಿಯರಿಗೆ ನಾನು, ನಮ್ಮ ತಮ್ಮ ಪೂಜೆ ಮಾಡಬೇಕಿತ್ತು. ಆದರೆ ಅವರಿಗೆ ಎಡೆ ಇಡಲು ಕೂಡ ಇವರು ಅವಕಾಶ ಕೊಟ್ಟಿಲ್ಲ. ಇಡಿ ಕಚೇರಿಯಲ್ಲೇ ಎಲ್ಲರನ್ನೂ ಸ್ಮರಿಸಿಕ್ಕೊಳ್ಳುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆಶಿ ಕಣ್ಣೀರಿಟ್ಟಿದ್ದಾರೆ.

ನನ್ನ ಕೆಲ ಸ್ನೇಹಿತರು ಹೇಳುತ್ತಿದ್ದಾರೆ ಉಪ್ಪು ತಿಂದವನು ನೀರು ಕುಡಿಬೇಕು ಅಂತ. ಹೌದು ನಾನು ನನ್ನ ಪಕ್ಷಕ್ಕೋಸ್ಕರ, ನಮ್ಮ ನಾಯಕರಿಗೋಸ್ಕರ, ನನ್ನನ್ನು ನಂಬಿದ ಜನಕ್ಕೋಸ್ಕರ ಹೋರಾಟ ಮಾಡಿಕೊಂಡು ನಾನು ಬಂದಿದ್ದೇನೆ. ಇದನ್ನೆಲ್ಲಾ ಎದುರಿಸುವಂತಹ ಶಕ್ತಿ ದೇವರು ನನಗೆ ಕೊಟ್ಟಿದ್ದಾನೆ. ನಾನು ಯಾರಿಗೂ ಮೋಸ ಮಾಡಿಲ್ಲ. ಕಳ್ಳತನ ಮಾಡಿಲ್ಲ. ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ. ಲಂಚದ ಆರೋಪವಿಲ್ಲ. ಅಧಿಕಾರಿ, ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com