ಡಿಕೆಶಿ ಬಂಧನ ರಾಜಕೀಯ ಪ್ರೇರಿತ: ಕಾಂಗ್ರೆಸ್ ನಾಯಕರ ಆರೋಪ

ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಅವರ ಬಂಧವಾಗಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡರು
ಕಾಂಗ್ರೆಸ್ ಮುಖಂಡರು
Updated on: 

ಬೆಂಗಳೂರು: ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಅವರ ಬಂಧವಾಗಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯವಾಗಿದೆ.  ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಬಂಧನವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಖಂಡಿಸಿದ್ದಾರೆ

ಮತ್ತೊಂದೆದೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ಇದು ಶೇ. 100 ರಷ್ಟು ರಾಜಕೀಯ ಪ್ರೇರಿತ ಬಂಧನವಾಗಿದೆ. ಕೇಂದ್ರ ಸರ್ಕಾರ ಆದಾಯ ತೆರಿಗೆ, ಇಡಿ, ರಿಸರ್ವ ಬ್ಯಾಂಕ್ ಸ್ವಾಯತ್ತ ಸಂಸ್ಥೆಗಳನ್ನು ಕೈಗೊಂಬೆ ಗಳಾಗನ್ನಾಗಿ ಮಾಡಿಕೊಂಡು ರಾಜಕೀಯ ದುರುದ್ದೇಶದಿಂದ ವಿರೋಧಪಕ್ಷವನ್ನು ತುಳಿಯುವ ಕೆಲಸ ಮಾಡುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com