ಡಿ.ಕೆ.ಶಿವಕುಮಾರ್ ಪ್ರಕರಣ ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ: ಸಚಿವ ಆರ್.ಅಶೋಕ 

ಡಿ.ಕೆ.ಶಿವಕುಮಾರ್ ಪ್ರಕರಣವನ್ನು ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ. 
ಡಿಕೆ.ಶಿವಕುಮಾರ್ ಹಾಗೂ ಸಚಿವ ಆರ್.ಅಶೋಕ್
ಡಿಕೆ.ಶಿವಕುಮಾರ್ ಹಾಗೂ ಸಚಿವ ಆರ್.ಅಶೋಕ್
Updated on: 

ಬೆಂಗಳೂರು: ಡಿ.ಕೆ.ಶಿವಕುಮಾರ್ ಪ್ರಕರಣವನ್ನು ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ. 

ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರಕರಣ ರಾಜಕೀಯ ಪ್ರೇರಿತವಲ್ಲ. ಇನ್ನೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಏನೂ ಆಗಿಲ್ಲ. ಇದನ್ನು ರಾಜಕಾರಣ ಎಂದು ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. 

ಡಿ.ಕೆ.ಶಿವಕುಮಾರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ವಿಚಾರಣೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯ, ಸಿಬಿಐ ಸ್ವಾಯತ್ತ ಸಂಸ್ಥೆಗಳು, ಕಾನೂನು ಪ್ರಕಾರ ಅವರು ಕ್ರಮ ಕೈಗೊಳ್ಳುತ್ತಾರೆ. ಇದನ್ನು ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧವೂ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವು. ಆಗ ನಾವ್ಯಾರೂ ಅದನ್ನು ರಾಜಕೀಯ ಎಂದು ಹೇಳಿರಲಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com