ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರಂತ ಗೊತ್ತಿಲ್ಲ: ಮಧ್ಯಂತರ ಚುನಾವಣೆ ಕುರಿತ ಹೇಳಿಕೆಗೆ ಶೆಟ್ಟರ್ ವ್ಯಂಗ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೊ ತಮಗೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ. 
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Updated on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೊ ತಮಗೆ ಗೊತ್ತಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಮಧ್ಯಂತರ ಚುನಾವಣೆಯಾಗಲಿದೆ ಎಂಬ ಭವಿಷ್ಯ ನುಡಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೈತ್ರಿ ಸರ್ಕಾರ ಪತನವಾದ ಮೇಲೆ ಸಿದ್ದರಾಮಯ್ಯ ಅವರು ಖಾಲಿಯಾಗಿ ಕುಳಿತಿದ್ದಾರೆ.ಅವರಿಗೆ ಯಾವುದೆ ಅಧಿಕಾರವೂ ಇಲ್ಲ.‌ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ,ಅವರ ಕನಸು ನನಸಾಗಲ್ಲ ,ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಅವರು ಶೆಟ್ಟರ್ ಸ್ಪಷ್ಟಪಡಿಸಿದರು.

ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿಯನ್ನು ದುರುಪಯೋಗ ಮಾಡಿಕೊಂಡಿದೆ ಎಂಬ ಡಿ ಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಡಿಕೆ ಶಿವಕುಮಾರ್ ಅವರಿಗೆ ಹಾಗೆ ಅನಿಸುತ್ತಿದೆ.ಅವರ ವಿರುದ್ಧ ತನಿಖೆ ನಡೆಯುತ್ತಿದ್ದು ಹೀಗಾಗಿ ಅವರಿಗೆ ಹಾಗೆ ಅನ್ನಿಸಿರಬಹುದು.ಅವರ ಈ ಭಾವನೆಗೆ ನಾವು ಏನೂ ಮಾಡಕ್ಕಾಗುವುದಿಲ್ಲ. ಇಡಿ, ಸಿಬಿಐ, ಐಟಿ ಸ್ವಾಯತ್ತ ಸಂಸ್ಥೆಗಳು ಕೇಂದ್ರದಿಂದ ಈ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ ಮತ್ತು ಕಾರಜೋಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು,
ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಹಾಗೆ ಹೇಳಿದವರೇ ಸ್ಪಷ್ಟೀಕರಣ ಕೊಡುತ್ತಾರೆ ಎಂದು ಜಾರಿಕೊಂಡರು.

ರಾಜ್ಯದಲ್ಲಿ ನೂತನ ಕೈಗಾರಿಕಾ ನೀತಿ ಜಾರಿಗೆ ತರಲು ಉದ್ದೇಶ ಸರ್ಕಾರಕ್ಕಿದೆ.ಕೈಗಾರಿಕೆ ಅಂದರೆ ಬೆಂಗಳೂರು ಕೇಂದ್ರಿತ ಎನ್ನುವ ಹಾಗಾಗಿದೆ.ಕೈಗಾರಿಕಾ ಅಭಿವೃದ್ಧಿ ಎರಡನೇ ಹಂತದ ನಗರಗಳಿಗೂ ವಿಸ್ತರಣೆ ಆಗಬೇಕಿದೆ.ಬೇರೆ ರಾಜ್ಯಗಳ ಕೈಗಾರಿಕಾ ನೀತಿಗಳನ್ನೂ ಅಧ್ಯಯನ ಮಾಡುತ್ತಿದ್ದೇವೆ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ನೀತಿ ಜಾರಿ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಹಿಂದಿನ ಸರ್ಕಾರ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ನಡೆಸಲು ತೀರ್ಮಾನಿಸಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಬಂಡವಾಳ ಹೂಡಿಕೆದಾರ ಸಮ್ಮೇಳನ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಮುಂದಿನ ಜನವರಿಯಲ್ಲಿ ಬಂಡವಾಳ ಹೂಡಿಕೆದಾರ ಸಮ್ಮೇಳನ ನಡೆಸುವ ಪ್ರಸ್ತಾಪ ಇದೆ ಎಂದು ತಿಳಿಸಿದರು.

ಆರ್ಥಿಕ‌ ಹಿಂಜರಿತ ಸಧ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿದೆ.ರಾಜ್ಯಕ್ಕೆ ಸೀಮಿತವಾದದ್ದಲ್ಲ.ನಾನು ಸಹ ಈ ಸಂಬಂಧ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ, ಎಲ್ಲಿ ಉದ್ಯೊಗ ಕಡಿತವಾಗಿದೆ, ಯಾವ ಕಂಪನಿ ಬಾಗಿಲು ಮುಚ್ಚಿವೆ, ಈ ಬಗ್ಗೆ ಮಾಹಿತಿ ಕ್ರೋಢೀಕರಣ ಮಾಡಿ ಒಂದು ತಿಂಗಳ ಒಳಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ.ಈಗಾಗಲೇ ಕೇಂದ್ರ ಸರ್ಕಾರ, ಹಣಕಾಸು ಇಲಾಖೆ ಹಲವು ಉಪಕ್ರಮ ಕೈಗೊಂಡಿದೆ‌. ಇದು ರಾಜ್ಯಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ವಿವರಿಸಿದರು.

ಕೈಗಾರಿಕೆಗಳ ಸಮಸ್ಯೆ ಬಗ್ಗೆ ಕೈಗಾರಿಕಾ ಪ್ರದೇಶಗಳಿಗೆ ನಾನೇ ಹೋಗಿ ತಪಾಸಣೆ ಮಾಡುತ್ತೇನೆ, ಅಲ್ಲಿನ ಸಮಸ್ಯೆಗಳ ಬಗ್ಗೆ ನಾವು ಉದ್ಯಮಿಗಳ ಜತೆ ಸಮಾಲೋಚನೆ ನಡೆಸಿ, ಪರಿಹಾರ ಹುಡುಕುವ ಕೆಲಸ ಮಾಡುತ್ತೇನೆ ಎಂದು ವಿವರಿಸಿದರು.
ಜಿಂದಾಲ್ ಗೆ ಭೂಮಿ ಪರಭಾರೆ ಪ್ರಕರಣದ ಬಗ್ಗೆ ಉತ್ತರಿಸಿದ ಅವರು,ಈ ಸಂಬಂಧ ಹಿಂದಿನ ಸರ್ಕಾರ ಸಂಪುಟ ಉಪಸಮಿತಿ ರಚಿಸಿತ್ತು. ಅದರೆ ಸಮಿತಿ ಏನು ವರದಿ ನೀಡಿದೆ ಎಂದು ನೋಡಬೇಕು. ಪರಿಸ್ಥಿತಿ ಏನಿದೆ ಎಂದು ಸಮಗ್ರವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ.ಸರ್ಕಾರ ರಚನೆಯಾಗಿ ಒಂದು ತಿಂಗಳಾಗಿದೆಯಷ್ಟೇ. ಇಲಾಖೆ ವಹಿಸಿಕೊಂಡು ಒಂದು ವಾರ ಆಗಿದ್ದು ಜಿಂದಾಲ್ ವಿಚಾರದಲ್ಲಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ವಿಳಂಬ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com