ಡಿಕೆಶಿ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ 

ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.ಬುಧವಾರ ಪಕ್ಷದ  ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು
ಕೆಪಿಸಿಸಿ ಅಧ್ಯಕ್ಷರು
Updated on

ಬೆಂಗಳೂರು: ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.

ಡಿಕೆ ಶಿವಕುಮಾರ್ ಬಂಧನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,  ರಾಜಕೀಯ ದುರುದ್ದೇಶದಿಂದ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ದ್ವೇಷದ ಕುತಂತ್ರದ ರಾಜಕಾರಣ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವ ಹೀನಕೃತ್ಯಕ್ಕಿಳಿದಿದೆ ಎಂದು ಆರೋಪಿಸಿದರು.

ಡಿಕೆ ಶಿವಕುಮಾರ್ ಅವರ ಬಂಧನವನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ ಅವರು , ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸೈದ್ದಾಂತಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಬುಧವಾರ ಪಕ್ಷದ  ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com