ಮೈತ್ರಿ ಮುರಿದ ಕುಮಾರಸ್ವಾಮಿ: ಉಪ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು: ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸನ್ನದ್ಧವಾಗಿದ್ದು, ಹುಣಸೂರು ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ಸ್ವತಂತ್ರ್ಯವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗಳಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ನಡೆಸಲಿದೆ, ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇ ಬೇಕು. ನನ್ನ ಇಡೀ ಸಮಯವನ್ನು ಹುಣಸೂರು ಚುನಾವಣೆ ಗೆಲ್ಲಲು ನೀಡುತ್ತೇನೆ ಎಂದು ಕುಮಾರಸ್ವಾಮಿ ಶಪಥ ಮಾಡಿದ್ದಾರೆ, ಕೆಟ್ಟ ಸರ್ಕಾರದಲ್ಲಿ ನನಗೆ ಬೆಂಬಲ ಸರಿ ಇಲ್ಲದಿದ್ದಾಗಲೂ ರೈತರ ಪರ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸಗಳೇ ನಮ್ಮ ಶ್ರೀರಕ್ಷೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ