ಎಲ್ಲಾ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ಬಿಜೆಪಿ ವಿಶ್ವಾಸ

ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಅನರ್ಹಗೊಂಡಿರುವ 17 ಶಾಸಕರು ಅಕ್ಟೋಬರ್ 21ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on: 

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಅನರ್ಹಗೊಂಡಿರುವ 17 ಶಾಸಕರು ಅಕ್ಟೋಬರ್ 21ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಅನರ್ಹ ಶಾಸಕರ ಪರವಾಗಿದ್ದು,  ಸರ್ವೋಚ್ಛ ನ್ಯಾಯಾಲಯ ಅನರ್ಹತೆಯನ್ನು ರದ್ಧುಗೊಳಿಸುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ.

ಬುಧವಾರ ಮಧ್ಯಾಹ್ನ ಸುಪ್ರೀಂಕೋರ್ಟ್ ತೀರ್ಪು ಹೊರಬೀಳಲಿದ್ದು ಅನರ್ಹ ಶಾಸಕರು ಉಸಿರು ಬಿಗಿ ಹಿಡಿದು ಕುಳಿತಿದ್ದಾರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾಡಿರುವ ಅನರ್ಹತೆ ರದ್ಧಾಗಿ ಎಲ್ಲಾ 17 ಶಾಸಕರು ಸ್ಪರ್ಧಿಸಲಿದ್ದಾರೆ ಎಂಬುದು ಬಿಜೆಪಿ ವಿಶ್ವಾಸ ವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com