ರಾಜಕೀಯ
ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಗೆಲ್ಲಲಿದ್ದು, ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಪತನಗೊಳ್ಳುತ್ತದೆ ಎಂದು ಭವಿಷ್ಯ ನುಡಿದರು.
ಯಾದಗಿರಿ: ಮತದಾರರು ಬಯಸಿದರೆ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗಬಹುದು.ಇದು ನನ್ನ ಕೈಯಲ್ಲಿ ಇಲ್ಲ, ಮತದಾರರ ಕೈಯಲ್ಲಿದೆ. ಮತದಾರರ ತೀರ್ಮಾನವೇ ಅಂತಿಮವಾಗುತ್ತದೆ. ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಗೆಲ್ಲಲಿದ್ದು,ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಪತನಗೊಳ್ಳುತ್ತದೆ ಎಂದು ಭವಿಷ್ಯ ನುಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ.ರಾಜ್ಯದಿಂದ 25ಕ್ಕೂ ಹೆಚ್ಚು ಸಂಸದರ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ,ಸಚಿವರು ಇದ್ದರು ಕೇಂದ್ರ ಸರ್ಕಾರದಿಂದ ನೆರೆ ಪರಿಹಾರದ ಹಣ ಬಿಡುಗಡೆ ಮಾಡಿಸಲು ವಿಫಲ ರಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ