ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ: ರಮ್ಯಾಗೆ ಬುಲೆಟ್ ಪ್ರಕಾಶ್ ಟಾಂಗ್

ಹಿಟ್ಲರ್ ಭಾವಚಿತ್ರದೊಂದಿಗೆ ಪ್ರಧಾನಿ ಮೋದಿ ಅವರನ್ನು ಹೋಲಿಕೆ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹಿಟ್ಲರ್ ಭಾವಚಿತ್ರದೊಂದಿಗೆ ಪ್ರಧಾನಿ ಮೋದಿ ಅವರನ್ನು ಹೋಲಿಕೆ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಬರೆದಿರುವ ಬುಲೆಟ್ ಪ್ರಕಾಶ್, 'ಇಡೀ ವಿಶ್ವವೇ ಮೋದಿಗೆ ಸೆಲ್ಯೂಟ್ ಹೊಡೆಯುವಾಗ ರಮ್ಯಾ ಅವರು ಹೀಯಾಳಿಸೋದು ಸರಿಯಲ್ಲ. ಗಣ್ಯವ್ಯಕ್ತಿಗಳ ಬಗ್ಗೆ ಮಾತನಾಡುವಾಗ ಎಚ್ಚರವಹಿಸಬೇಕು. ರಾಜಕೀಯ ತಜ್ಞರ ಬಳಿ ಟ್ಯೂಷನ್ ಗೆ ಹೋಗಿ ಕಲಿತುಕೊಳ್ಳಿ. ಜನರಿಗೆ ತಪ್ಪು ಸಂದೇಶ ರವಾನೆ ಮಾಡ್ಬೇಡಿ ರಮ್ಯಾ ಮೇಡಂ' ಎಂದು ತಿರುಗೇಟು ನೀಡಿದ್ದಾರೆ.
'ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು, ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತಾಡೋಕ್ಕೆ ಯಾವುದೇ ನೈತಿಕತೆ ಇಲ್ಲ. ನಾಳೆ ವೀಡಿಯೋ ಮೂಲಕ ಉತ್ತರ ಕೊಡುತ್ತೇನೆ ಎಂದು ಹೇಳಿದ್ದರು.
ಅದರಂತೆ ಇಂದು ವಿಡಿಯೋ ಕೂಡ ಬಿಡುಗಡೆ ಮಾಡಿರುವ ಬುಲೆಟ್ ಪ್ರಕಾಶ್, 'ರಮ್ಯಾ ಅವರು ರಾಷ್ಟ್ರೀಯ ಪಕ್ಷದಲ್ಲಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಮಾತಾಡೋದು ಸರಿ ಅಲ್ಲ. ಒಬ್ಬ ನಾಯಕನ ಬಗ್ಗೆ ಹೀಯಾಳಿಸಿ ಮಾತಾಡೋದು ತಪ್ಪು ಅನಿಸಿತ್ತು. ಹೀಗಾಗಿ ನಿನ್ನೆ ನಾನು ಟ್ವೀಟ್ ಮಾಡಿದ್ದೆ. ರಮ್ಯಾ ಅವರ ಮನಸ್ಥಿತಿ ಹೇಗಿದೆ ಅಂದರೆ, ಪಾಕಿಸ್ತಾನ ಸ್ವರ್ಗ. ಇಂತಹವರಿಂದ ನಾವು ಏನು ನಿರೀಕ್ಷೆ ಮಾಡಲು ಸಾಧ್ಯ. ಏನೂ ಮಾಡೋದಕ್ಕೆ ಆಗಲ್ಲ. ಹೀಗಾಗಿ ಇನ್ನು ಮುಂದೆಯಾದರೂ ಮೇಡಂ ಅವರು ರಾಜಕಾರಣದಲ್ಲಿ ಪ್ರೌಢತೆಯನ್ನು ಬೆಳೆಸಿಕೊಳ್ಳಲಿ. ರಾಜಕೀಯ ತಜ್ಞರ ಬಳಿ ಹೋಗಿ ಟ್ಯೂಷನ್ ತೆಗೆದುಕೊಳ್ಳಲಿ. ಹೀಗೆ ಕಲಿತರೆ ತುಂಬಾ ಸಹಾಯವಾಗುತ್ತದೆ. ಸಮಾಜಕ್ಕೂ ಹೆಲ್ಪ್ ಆಗುತ್ತದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com