ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು: ರಮ್ಯಾ ವಿರುದ್ಧ ನಟ ಜಗ್ಗೇಶ್ ಕಿಡಿ

ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳನ್ನು ತಿದ್ದಲು ಹೋಗಬಾರದು ಎಂದು ಹೇಳುವ ಮೂಲಕ ನಟ ಜಗ್ಗೇಶ್ ಕೂಡ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

Published: 30th April 2019 12:00 PM  |   Last Updated: 30th April 2019 02:04 AM   |  A+A-


Actor Jaggesh Critisizes Congress Social Media Chief Ramya

ಸಂಗ್ರಹ ಚಿತ್ರ

Posted By : SVN SVN
Source : Online Desk
ಬೆಂಗಳೂರು: ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳನ್ನು ತಿದ್ದಲು ಹೋಗಬಾರದು ಎಂದು ಹೇಳುವ ಮೂಲಕ ನಟ ಜಗ್ಗೇಶ್ ಕೂಡ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಕೆ ಮಾಡಿ ತಿರುಚಿದ ಫೋಟೋ ಅಪ್ಲೋಡ್ ಮಾಡಿದ್ದ ನಟಿ ರಮ್ಯಾಗೆ ನಟ ಬುಲೆಟ್ ಪ್ರಕಾಶ್ ತಿರುಗೇಟು ನೀಡಿದ್ದರು. ಈ ಕುರಿತು ಟ್ವೀಟ್ ಮಾಡಿದ್ದ ಪ್ರಕಾಶ್, 'ಇಡೀ ವಿಶ್ವವೇ ಮೋದಿಗೆ ಸೆಲ್ಯೂಟ್ ಹೊಡೆಯುವಾಗ ರಮ್ಯಾ ಅವರು ಹೀಯಾಳಿಸೋದು ಸರಿಯಲ್ಲ. ಗಣ್ಯವ್ಯಕ್ತಿಗಳ ಬಗ್ಗೆ ಮಾತನಾಡುವಾಗ ಎಚ್ಚರವಹಿಸಬೇಕು. ರಾಜಕೀಯ ತಜ್ಞರ ಬಳಿ ಟ್ಯೂಷನ್ ಗೆ ಹೋಗಿ ಕಲಿತುಕೊಳ್ಳಿ. ಜನರಿಗೆ ತಪ್ಪು ಸಂದೇಶ ರವಾನೆ ಮಾಡ್ಬೇಡಿ ರಮ್ಯಾ ಮೇಡಂ' ಎಂದು ಹೇಳಿದ್ದರು.

ಅಲ್ಲದೆ ಇಂದು ವಿಡಿಯೋ ಮೂಲಕವೂ ರಮ್ಯಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಈ ಪಟ್ಟಿಗೆ ನಟ ಜಗ್ಗೇಶ್ ಕೂಡ ಸೇರಿದ್ದು, ನಟ ಬುಲೆಟ್ ಪ್ರಕಾಶ್ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಅವರು, 'ಸಹೋದರ, ದಾರಿ ತಪ್ಪಿದ ಮಕ್ಕಳನ್ನು ತಿದ್ದಬಹುದು. ಆದರೆ ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು. ಹೀಗೆ ದಾರಿ ತಪ್ಪಲು ಹುಟ್ಟಿದ ಮಕ್ಕಳ ಇತಿಹಾಸವೇ ಯಕ್ಷಪ್ರಶ್ನೆ. ಜನನವು ಹೇಗೋ ಹಾಗೇ ಜೀವನ. ಅಂಥ ಮಕ್ಕಳ ಬಗ್ಗೆ ಅನುಕಂಪ ವಹಿಸಬೇಕು. ಅಂಥವರೆಲ್ಲ ಮಾನಸಿಕ ವಿಕಲಚೇತನರು. ಇಂತಹವರನ್ನು ನೋಡಿ ಕೂಡ ಸಂತೋಷ ಪಡುವ ಜನರು ಇರುವುದು ದೌರ್ಭಾಗ್ಯ' ಎಂದು ವ್ಯಂಗ್ಯಭರಿತವಾಗಿ ಟ್ವೀಟ್​ ಮಾಡಿದ್ದಾರೆ.
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp