ಜೆಡಿಎಸ್ ಗೆ ಬಂದ್ರೆ ಸಚಿವ ಸ್ಥಾನ: ರಮೇಶ್ ಜಾರಕಿಹೊಳಿಗೆ ಸಿಎಂ ಆಫರ್; ಕುರ್ಚಿ ಉಳಿಸಿಕೊಳ್ಳಲು ಎಚ್ ಡಿಕೆ ಸರ್ಕಸ್!

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಉಂಟಾಗುವ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಸಿಎಂ ಕುಮಾರಸ್ವಾಮಿ ತಮ್ಮ ...
ರಮೇಶ್ ಜಾರಕಿಹೊಳಿ ಮತ್ತು ಎಚ್.ಡಿ. ಕುಮಾರಸ್ವಾಮಿ
ರಮೇಶ್ ಜಾರಕಿಹೊಳಿ ಮತ್ತು ಎಚ್.ಡಿ. ಕುಮಾರಸ್ವಾಮಿ
ಬೆಳಗಾವಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಉಂಟಾಗುವ ಬೆಳವಣಿಗೆಗಳ ಬಗ್ಗೆ ಮಾಹಿತಿಯಿರುವ ಸಿಎಂ ಕುಮಾರಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹಲವು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗಲಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ, ದೂರವಾಣಿಯಲ್ಲಿ ರಮೇಶ್ ಜೊತೆ ಮಾತನಾಡಿರುವ ಸಿಎಂ, ಜೆಡಿಎಸ್ ಸೇರಿದರೇ ಕೂಡಲೇ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದೆಂಬ ಆಫರ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ ಈ ಆಫರ್ ಗೆ ಜಾರಕಿಹೊಳಿ ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬ ಬಗ್ಗೆ ಯಾವುಗೇ ಮಾಹಿಲಭ್ಯವಾಗಿಲ್ಲ, ಈಗಾಗಲೇ ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ, ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ, ಅದರ ಜೊತೆಗೆ ರಮೇಶ್ ಜಾರಕಿಹೊಳಿಯನ್ನು ಸಂಪುಟಕ್ಕೆ ಸೇರಿಸಿಕೊಂಡರೇ, ಈಗಾಗಲೇ ಸಚಿವ ಸ್ಥಾನದಿಂದ  ವಂಚಿತರಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೇಗುದಿ ಮತ್ತಷ್ಟು ಹೆಚ್ಚಲಿದೆ. ಇದರಿಂದ ಸಿಎಂ ಕುಮಾರಸ್ವಾಮಿಗೆ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆಯಿದೆ.
ಕುಮಾರಸ್ವಾಮಿ ಆವರು ನೀಡಿರುವ ಅಫರ್ ಗೆ ಜಾರಕಿಹೊಳಿ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ.
ಆದರೆ ಈಗಾಗಲೇ ಬೆಳಗಾವಿ ಸಾಹುಕಾರ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ ಆದರೆ ಸಿಎಂ ನೀಡಿರುವ ಈ ಆಫರ್ ಅನ್ನು ಜಾರಕಿಹೊಳಿ ಒಪ್ಪಿಕೊಳ್ಳುತ್ತಾರಾ ಎಂಬುದನ್ನು ಕಾದು ನೊಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com