ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು?

ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಸದ್ಯಕ್ಕೆ ಸ್ಪರ್ಧಿಸುವ ಬಗ್ಗೆ

Published: 02nd August 2019 12:00 PM  |   Last Updated: 02nd August 2019 03:10 AM   |  A+A-


Anitha kumaraswamy clarification about Nikhil kumar

ಅನಿತಾ ಮತ್ತು ನಿಖಿಲ್ ಕುಮಾರ ಸ್ವಾಮಿ

Posted By : SD SD
Source : UNI
ರಾಮನಗರ: ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಸದ್ಯಕ್ಕೆ ಸ್ಪರ್ಧಿಸುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಚುನಾವಣೆ ಬಳಿಕ ನಿಖಿಲ್ ಕುಮಾರಸ್ವಾಮಿ ಪುನಃ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದು, ಒಂದು ಹೊಸ ಪ್ರೊಡಕ್ಷನ್ ನ ಸಿನಿಮಾವೊಂದರಲ್ಲಿ ನಟಿಸಲು ಸಹಿ ಹಾಕಿದ್ದಾನೆ. ಹೀಗಾಗಿ ಉಪಚುನಾವಣೆಯಲ್ಲಿ ಅವನ ಸ್ಪರ್ಧೆ ಕುರಿತು ಇನ್ನೂ ತೀರ್ಮಾನವಾಗಿಲ್ಲ ಎಂದು ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರು ಯಾರಿಗೂ ತೊಂದರೆ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ನಾಯಕರು ಕೀಳುಮಟ್ಟದ ರಾಜಕೀಯ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp