ಒಂದೆಡೆ ಅತಿವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ?

ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಒಂದೆಡೆ ಅತೀವೃಷ್ಠಿ, ಮತ್ತೊಂದೆಡೆ ಅನಾವೃಷ್ಟಿ, ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ಇದೇನು ಏಕಚಕ್ರಾಧಿಪತ್ಯವೇ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ
ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವನ್ನು ಮುಂದಿಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕಾಲೆಳೆದಿದ್ದಾರೆ. ತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ ?, ಸಂಪುಟ ವಿಸ್ತರಣೆಯದ್ದೇ? ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ ? ಏಕಚಕ್ರಾಧಿಪತ್ಯವೇ ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
'ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?.. ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.  ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?  ಸಂಪುಟ ವಿಸ್ತರಣೆಯದ್ದೇ?.. ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ  ಕಾಣುತ್ತಿಲ್ಲವೇ?' ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com