ಉಪ ಚುನಾವಣೆ: ಆರ್ . ಪೇಟೆಯಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲ್ಲ- ಹೆಚ್ ಡಿ ಕುಮಾರಸ್ವಾಮಿ

ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಇದ್ದ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಮಂಡ್ಯ: ಕೆ. ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಇದ್ದ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್  ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದ ಯಾವುದೇ ಸದಸ್ಯ ಕೆ.ಆರ್. ಪೇಟೆ ಕ್ಷೇತ್ರದ ಅಭ್ಯರ್ಥಿಯಾಗುವುದಿಲ್ಲ. ಸ್ಥಳೀಯ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದಿಂದ ಸ್ಥಳೀಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು, ಅವರನ್ನು ಗೆಲ್ಲಿಸಿಕೊಂಡು ಬರುವುದು  ನಿಮ್ಮಗಳ ಜವಾಬ್ದಾರಿಯಾಗಿದೆ ಎಂದು ಕಾರ್ಯಕರ್ತರಿಗೆ ಹೇಳಿದರು. 
ಕೆ. ಆರ್. ಪೇಟೆಯೊಂದಿಗೆ ಹೆಚ್ ಡಿ ದೇವೆಗೌಡರು ಹೊಂದಿರುವ ಸಂಬಂಧ ಹಾಗೂ ಕಾವೇರಿ, ಹೇಮಾವತಿ ನೀರಿಗಾಗಿ ನಡೆಸಿದ ಹೋರಾಟವನ್ನು ನೆನಪು ಮಾಡಿಕೊಂಡರು. ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಲೇವಡಿ ಮಾಡುವವರು ಮೊದಲು ವಾಸ್ತವ ಸ್ಥಿತಿಗತಿಗಳನ್ನು ಅರಿಯಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com