ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ- ಕೆ. ಸಿ. ವೇಣುಗೋಪಾಲ್ 

ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಮರ್ಥ್ಯವಿರುವ ನೂರಾರು ನಾಯಕರಿದ್ದಾರೆ. ಆದಾಗ್ಯೂ, ಪ್ರಸ್ತುತ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ- ಕೆ. ಸಿ. ವೇಣುಗೋಪಾಲ್ 

ಬೆಂಗಳೂರು: ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಮರ್ಥ್ಯವಿರುವ ನೂರಾರು ನಾಯಕರಿದ್ದಾರೆ. ಆದಾಗ್ಯೂ, ಪ್ರಸ್ತುತ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಸೋನಿಯಾ ಗಾಂಧಿ ಅವರ ಅನುಭವ ಪಕ್ಷಕ್ಕೆ ಅಗತ್ಯವೆಂದು ನಾಯಕರಿಗೆ ಅನಿಸಿತು. ಆಂತರಿಕ ಪ್ರಜಾಪ್ರಭುತ್ವದಲ್ಲಿ ಪಕ್ಷ ನಂಬಿಕೆ ಹೊಂದಿದ್ದು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಆಧಾರದ ಮೇಲೆ ಸೋನಿಯಾಗಾಂಧಿ ಅವರನ್ನು ಮತ್ತೆ ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಗಾಂಧಿ ಕುಟುಂಬದ ನಾಯಕತ್ವದಡಿಯಲ್ಲಿ ಕೆಲಸ ಮಾಡಲು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಹೆಮ್ಮೆಯಾಗುತ್ತದೆ. ಅವರ ತ್ಯಾಗ ಎಲ್ಲಾ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಮಾಧ್ಯಮಗಳಲ್ಲಿ ಮಾತ್ರ ಹೀಗೆ ಬಿಂಬಿಸಲಾಗುತ್ತದೆ. ಪಕ್ಷದಲ್ಲಿ ವಿವಿಧ ಅಭಿಪ್ರಾಯ ವ್ಯಕ್ತವಾಗುವುದು ಸಹಜ. ಆದರೆ. ಒಂದು ಬಾರಿ ನಿರ್ಧಾರ ಕೈಗೊಂಡರೆ ಅದನ್ನು ಎಲ್ಲರು ಸ್ವೀಕರಿಸುತ್ತಾರೆ ಎಂದರು. 

ಹಳೆಯ ಹಾಗೂ ಯುವ ತಲೆಮಾರಿನ ನಾಯಕರು ಪಕ್ಷದಲ್ಲಿದ್ದಾರೆ. ವಿವಿಧ ವಿಷಯಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಈ ಅಭಿಪ್ರಾಯಗಳನ್ನೇ ಪೈಪೋಟಿ ಎಂದು ಹೇಳಲು ಸಾಧ್ಯವಿಲ್ಲ. ಸೋನಿಯಾಗಾಂಧಿ ಅವರ ನಾಯಕತ್ವದಡಿಯಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಹೇಳಿದರು.

ಪಕ್ಷ ಏಳು ಬೀಳುಗಳನ್ನು ಕಂಡಿದೆ. ದೇಶದ ಏಕತೆ, ಜಾತ್ಯತೀತ, ಪ್ರಜಾಪ್ರಭುತ್ವ ಸಂರಕ್ಷಣೆ ಪಕ್ಷದ ಗುರಿಯಾಗಿದೆ. ತನ್ನ ನಂಬಿರುವ ನಂಬಿಕೆಗಳನ್ನು ಪಕ್ಷ ಹುಸಿಗೊಳಿಸುವುದಿಲ್ಲ. ಪ್ರಜಾಸತತ್ಮಕ ವಿರೋಧಿ ರೀತಿಯಲ್ಲಿ ಸರ್ಕಾರ ಕೈಗೊಂಡಿರುವ ಸಂವಿಧಾನದ 370 ವಿಧಿ ರದ್ದತಿ  ಖಂಡಿಸಿ ಕಾರ್ಯಕಾರಿ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com