ಸಿಎಂ ಯಡಿಯೂರಪ್ಪ-ಜಿಟಿ ದೇವೇಗೌಡ ಭೇಟಿ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?
ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್‌ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.
Published: 13th August 2019 12:14 PM | Last Updated: 13th August 2019 12:14 PM | A+A A-

ಬೆಂಗಳೂರು: ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್‌ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿದ ಜಿ.ಟಿ.ದೇವೇಗೌಡ ಕೆಲ ಕಾಲ ಮಾತುಕತೆ ನಡೆಸಿದರು. ಈ ಭೇಟಿ - ಮಾತುಕತೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಜೆಡಿಎಸ್ ಪಕ್ಷದಿಂದ ಅನರ್ಹಗೊಂಡಿರುವ ಶಾಸಕ ವಿಶ್ವನಾಥ್,ಎಸ್.ಟಿ.ಸೋಮಶೇಖರ್ ಅವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿದ ಜಿ.ಟಿ.ದೇವೇಗೌಡ ಅವರು, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಜಿಟಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಭೇಟಿ ಹಿಂದೆ ಮತ್ತಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸಂದೇಶ ರವಾನಿಸಿದೆ.