ಪೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ- ಸಿದ್ದರಾಮಯ್ಯ

ಪೋನ್ ಕದ್ದಾಲಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೋನ್ ಕದ್ದಾಲಿಕೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಇದರ ಬಗ್ಗೆ ತನಿಖೆಯಾಗಲಿ ಯಾರು ತಪ್ಪಿತಸ್ಥರಿದ್ದಾರೆ  ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಪೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ- ಸಿದ್ದರಾಮಯ್ಯ

ಬೆಂಗಳೂರು: ಪೊಲೀಸ್ ಅಧಿಕಾರಿಗಳ ದೂರವಾಣಿ ಕದ್ದಾಲಿಕೆಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದವರು, ವಿರೋಧ ಪಕ್ಷ ಹಾಗೂ ಬಂಡಾಯ ಶಾಸಕರ ಕರೆಗಳ ಮೇಲೂ ಕಳ್ಳಗಿವಿ ಇಡಲಾಗಿತ್ತು ಎಂಬ ಸ್ಪೋಟಕ ಮಾಹಿತಿ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.

 ಪೋನ್ ಕದ್ದಾಲಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೋನ್ ಕದ್ದಾಲಿಕೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಇದರ ಬಗ್ಗೆ ತನಿಖೆಯಾಗಲಿ ಯಾರು ತಪ್ಪಿತಸ್ಥರಿದ್ದಾರೆ  ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಇಂದು ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದವರು, ಸಂವಿಧಾನದ ಮೇಲೆ ಗೌರವ ಇಲ್ಲದವರು, ಅಧಿಕಾರಕ್ಕೆ ಬಂದಾಗ ಇಂತಹ ಪ್ರಕ್ಷುಬ್ದತೆ  ನಿರ್ಮಾಣವಾಗುತ್ತದೆ. ಇಂತಹ ಸಂದರ್ಭದಲ್ಲಿ ದೇಶದ ರಕ್ಷಣೆಗೆ ನಾವು ಮತ್ತೆ ಮತ್ತೆ ಸಂಕಲ್ಪ ತೊಡಬೇಕಿದೆ ಎಂದರು.

ದೇಶಕ್ಕಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಬ್ರಿಟಿಷರ ಗುಲಾಮಗಿರಿಯಿಂದ ದೇಶವನ್ನು ಸ್ವತಂತ್ರಗೊಳಿಸಲು ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್, ಮೌಲಾನಾ ಆಜಾದ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಮಂದಿ ಹೋರಾಡಿದ್ದಾರೆ. ಲಕ್ಷಾಂತರ ಮಂದಿ ತ್ಯಾಗ, ಬಲಿದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com