ದೂರವಾಣಿ ಕದ್ದಾಲಿಕೆ ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ಶಾಸಕರ ಗಂಭೀರ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ..
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ಶಾಸಕರ ಗಂಭೀರ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 

ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ 14 ತಿಂಗಳ ಕಾಲ ಸಿಎಂ ಆಗಿದ್ದ ಅವಧಿಯಲ್ಲಿ ಹಲವು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಈ ಬಗ್ಗೆ  ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಕಾಂಗ್ರೆಸ್,.ಜೆಡಿಎಸ್, ಹಾಗೂ ಬಿಜೆಪಿಯ ಹಿರಿಯ ನಾಯಕರು, ಹಿರಿಯ ಅಧಿಕಾರಿಗಳು, ಹಾಗೂ ಪತ್ರಕರ್ತರ ಫೋನ್ ಗಳನ್ನು ಕದ್ದಾಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com