ಆರ್ಟಿಕಲ್ 370 ರದ್ದಾಯ್ತು, ಮುಂದಿನ ಸ್ವಾತಂತ್ರ್ಯೋತ್ಸವಕ್ಕೆ ಪಾಕ್ ಆಕ್ರಮಿತ ಕಾಶ್ಮೀರ ಭಾರತ ಭಾಗವಾಗಲಿದೆ: ಶೋಭಾ

ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(370) ಕಿತ್ತೆಸೆದಿದ್ದು ಮುಂದಿನ ಸ್ವಾತಂತ್ಯ್ರೋತ್ಸವದ ವೇಳೆಗೆ ಪಾಕ್ ಆಕ್ರಮಿತ ಕಾಶ್ಮೀರ...
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(370) ಕಿತ್ತೆಸೆದಿದ್ದು ಮುಂದಿನ ಸ್ವಾತಂತ್ಯ್ರೋತ್ಸವದ ವೇಳೆಗೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾರತದ ಭಾಗವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆ ಅವರು 370 ವಿಧಿ ರದ್ದುಗೊಳಿಸಿದ್ದರಿಂದ ಈ ಬಾರಿ ಕಾಶ್ಮೀರದಲ್ಲೂ ಸಂಭ್ರಮ ಹೆಚ್ಚಿದೆ. ಇದೇ ರೀತಿ ಮುಂದಿನ ಸ್ವತಂತ್ರ್ಯೋತ್ಸವದ ವೇಳೆಗೆ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

370 ವಿಧಿ ರದ್ದು ಕುರಿತಂತೆ ಸಂಸತ್ತಿನಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶ ಭಾರತದ ಭಾಗ ಆಗಬೇಕು ಎಂದು ಹೇಳಿದ್ದರು. ಹೀಗಾಗಿ ಬರುವ ವರ್ಷದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಎಂಬ ಪದವೇ ಇರಲ್ಲ. ಅದು ಮತ್ತೆ ಭಾರತದ ಭಾಗವಾಗಲಿದೆ ಎಂಬ ವಿಶ್ವಾಸವಿದೆ ಎಂದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com