ಸಂಪುಟ ರಚನೆಗೆ ಅಮಿತ್ ಶಾ ಅಂಕಿತ;  ನೂತನ ಸಚಿವರ ಪಟ್ಟಿ ಇಲ್ಲಿದೆ

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಲ್ಲರೂ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಸಚಿವ ಸಂಪುಟ ರಚನೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ.

Published: 20th August 2019 08:29 AM  |   Last Updated: 20th August 2019 08:59 AM   |  A+A-


B S Yedyurappa

ಬಿ ಎಸ್ ಯಡಿಯೂರಪ್ಪ

Posted By : Sumana Upadhyaya
Source : The New Indian Express

ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಎಲ್ಲರೂ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಸಚಿವ ಸಂಪುಟ ರಚನೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ.


ಇಂದು ಬೆಳಗ್ಗೆ 10.30ರಿಂದ 11.30ರ ನಡುವೆ 17 ಶಾಸಕರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಹೆಸರುಗಳು ಇಂತಿದೆ: ಗೋವಿಂದ ಕಾರಜೋಳ, ಡಾ ಅಶ್ವಥ ನಾರಾಯಣ ಸಿ, ಲಕ್ಷ್ಮಣ ಸಂಗಪ್ಪ ಸವದಿ, ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಜಗದೀಶ್ ಶೆಟ್ಟರ್, ಬಿ ಶ್ರೀರಾಮುಲು, ಎಸ್ ಸುರೇಶ್ ಕುಮಾರ್, ವಿ ಸೋಮಣ್ಣ, ಸಿ ಟಿ ರವಿ, ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಜೆ ಸಿ ಮಾಧುಸ್ವಾಮಿ, ಚಂದ್ರಕಾಂತ ಗೌಡ ಚನ್ನಪ್ಪಗೌಡ ಪಾಟೀಲ್, ಹೆಚ್ ನಾಗೇಶ್, ಪ್ರಭು ಚೌಹಾಣ್ ಮತ್ತು ಶಶಿಕಲಾ ಅಣ್ಣಾಸಾಹೇಬ್ ಜೊಳ್ಳೆ. ಇವರೆಲ್ಲರೂ ಸಂಪುಟ ದರ್ಜೆ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. =100%


ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ 25 ದಿನಗಳ ನಂತರ ಸಚಿವ ಸಂಪುಟ ರಚನೆಯಾಗುತ್ತಿದೆ. 

Stay up to date on all the latest ರಾಜಕೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp