ಸಂಪುಟದಲ್ಲಿ ಘಟಾನುಘಟಿಗಳಿಗೆ ಸಿಗದ ಅವಕಾಶ: ಬೆಂಗಳೂರಿಗೆ ಸಿಂಹಪಾಲು!

ಸಂಪುಟದಲ್ಲಿ ಅವಕಾಶ ಸಿಕ್ಕಿದವರು ಹರ್ಷ ವ್ಯಕ್ತಪಡಿಸಿದರೆ, ಅವಕಾಶ ಸಿಗದವರು ಬೇಸರ ಹಾಗೂ ನಿರಾಸೆ ವ್ಯಕ್ತಪಡಿಸಿದ್ದಾರೆ.  ರಾಜುಗೌಡ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಉಮೇಶ್ ಕತ್ತಿ ಮುಂತಾದ ಘಟಾನುಘಟಿಗಳಿಗೆ...

Published: 20th August 2019 10:01 AM  |   Last Updated: 20th August 2019 10:41 AM   |  A+A-


BSY Cabinet: No Ministry For Umesh katti and renukacharya

ಸಂಪುಟದಲ್ಲಿ ಘಟಾನುಘಟಿಗಳಿಗೆ ಸಿಗದ ಅವಕಾಶ: ರೇಣುಕಾಚಾರ್ಯ, ಉಮೇಶ್ ಕತ್ತಿಗೆ ಇಲ್ಲ ಸ್ಥಾನ!

Posted By : Shilpa D
Source : UNI

ಬೆಂಗಳೂರು: ಸಂಪುಟದಲ್ಲಿ ಅವಕಾಶ ಸಿಕ್ಕಿದವರು ಹರ್ಷ ವ್ಯಕ್ತಪಡಿಸಿದರೆ, ಅವಕಾಶ ಸಿಗದವರು ಬೇಸರ ಹಾಗೂ ನಿರಾಸೆ ವ್ಯಕ್ತಪಡಿಸಿದ್ದಾರೆ. ರಾಜುಗೌಡ, ಬಾಲಚಂದ್ರ ಜಾರಕಿಹೊಳಿ, ರೇಣುಕಾಚಾರ್ಯ, ಉಮೇಶ್ ಕತ್ತಿ ಮುಂತಾದ ಘಟಾನುಘಟಿಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ.

ಯಾರೇ ಅಸಮಾಧಾನಗೊಂಡಿದ್ದರೂ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಅವರ ಬೆಂಬಲಿಗರು, ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿರಿಯ ಶಾಸಕ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಶಿವನಗೌಡ ನಾಯಕ್, ಬಸವಗೌಡ ಯತ್ನಾಳ್, ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಸುಳ್ಯ ಶಾಸಕ ಎಸ್.ಅಂಗಾರ ಮುಂತಾದವರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಇನ್ನೂ ಶಾಸಕ ರಾಜು ಗೌಡ ಕೂಡ ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಸಂಪುಟದಲ್ಲಿ ದಕ್ಷಿಣ ಕನ್ನಡಕ್ಕೆ ಯಾವುದೇ ಸ್ಥಾನ ಸಿಕ್ಕಿಲ್ಲ. ಇಲ್ಲಿ 8 ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಗೆದ್ದಿತ್ತು. ಉಡುಪಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿತ್ತು. ಸುಳ್ಯ ಶಾಸಕ ಎಸ್. ಅಂಗಾರ ಆರು ಬಾರಿ ಗೆದ್ದಿದ್ದರೂ ಒಮ್ಮೆಯೂ ಸಚಿವ ಸ್ಥಾನ ನೀಡಿಲ್ಲ. ಆದರೆ ಉಡುಪಿಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಕ್ಕಿದೆ.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp