ಜಮ್ಮು-ಕಾಶ್ಮೀರಕ್ಕೆ ವಿಶೇಷಾಧಿಕಾರ ರದ್ದು, ಇತಿಹಾಸ ಗೊತ್ತಿಲ್ಲದೇ ಸಮರ್ಥನೆ ಬೇಡ- ವೀರಪ್ಪ ಮೊಯ್ಲಿ 

ಜಮ್ಮು- ಕಾಶ್ಮೀರಕ್ಕೆ ವಿಶೇಷಾಧಿಕಾರ ರದ್ದು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿರುವ ನಮ್ಮ ಪಕ್ಷದ ಕೆಲವರು ನಿಜವಾದ ಕಾಂಗ್ರೆಸ್ಸಿಗರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಎಂ. ವೀರಪ್ಪ ಮೊಯ್ಲಿ
ಎಂ. ವೀರಪ್ಪ ಮೊಯ್ಲಿ

ಬೆಂಗಳೂರು: ಜಮ್ಮು- ಕಾಶ್ಮೀರಕ್ಕೆ ವಿಶೇಷಾಧಿಕಾರ ರದ್ದು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿರುವ ನಮ್ಮ ಪಕ್ಷದ ಕೆಲವರು ನಿಜವಾದ ಕಾಂಗ್ರೆಸ್ಸಿಗರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಜಮ್ಮು- ಕಾಶ್ಮೀರಕ್ಕೆ ವಿಶೇಷಾಧಿಕಾರ ತೀರ್ಮಾನ ಕೈಗೊಂಡಿದ್ದು ಆಗಿನ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಮನೆಯಲ್ಲಿ. ಅನೇಕರಿಗೆ ಇತಿಹಾಸವೇ ಗೊತ್ತಿಲ್ಲ. ಪಾಕಿಸ್ತಾನವನ್ನು ಮುಸ್ಲಿಂ ಪ್ರತ್ಯೇಕ ರಾಷ್ಟ್ರ ನಿರ್ಮಾಣ ಮಾಡಿದ್ದು, ಹಿಂದೂ ಮಹಾಸಭಾ ಹೊರತು ಮಹಮದ್ ಅಲಿ ಜಿನ್ನಾ ಅಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ  ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಈಗ ಚೀನಾದ ಜೊತೆ ಸಿಡಿದೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವ ಎನ್ ಡಿ ಎ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿರುವ ಕಾಂಗ್ರೆಸಿಗರು ಯಾರು ನಿಜವಾದ ಕಾಂಗ್ರೆಸಿಗರಲ್ಲ, ಅವರಿಗ್ಯಾರಿಗೂ ದೇಶ ಹಾಗೂ ಪಕ್ಷದ ಇತಿಹಾಸವೇ ಗೊತ್ತಿಲ್ಲ ಎಂದು ಟೀಕಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com