ರಾಜ್ಯ ಬಿಜೆಪಿ ನೂತನ ಸಾರಥಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ  ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ನಳಿನ್ ಕುಮಾರ್ ಕಟೀಲು
ನಳಿನ್ ಕುಮಾರ್ ಕಟೀಲು

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ  ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್  ಶಾಕ್ ನೀಡಿದೆ.  

ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಇದೀಗ ಈ ಸ್ಥಾನಕ್ಕೆ  ಸಂಘ ಪರಿವಾರ ಹಿನ್ನೆಲೆಯ ನಳಿನ್ ಕುಮಾರ್ ಕಟೀಲು ಅವರನ್ನು ನೇಮಕ ಮಾಡುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಪಾಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com