ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಜ್ವಾಲಾಮುಖಿ 

17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ...
ತಿಪ್ಪಾರೆಡ್ಡಿ ಮತ್ತು ಗೂಳಿಹಟ್ಟಿ ಶೇಖರ್
ತಿಪ್ಪಾರೆಡ್ಡಿ ಮತ್ತು ಗೂಳಿಹಟ್ಟಿ ಶೇಖರ್

ಬೆಂಗಳೂರು: 17 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೊನೆಯ ಕ್ಷಣದವರೆಗೂ ಸಚಿವರು ಯಾರಾಗಲಿದ್ದಾರೆ ಎಂಬುದು ರಹಸ್ಯವಾಗೇ ಉಳಿದಿತ್ತು. ಆದರೀಗ ಇದಕ್ಕೆ ತೆರೆ ಬಿದ್ದಿದ್ದು, ಸಚಿವರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೊದಲ ಹಂತದಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮಗೂ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ತ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದ್ದರೆ ಇತ್ತ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅತೃಪ್ತ ಶಾಸಕರು ಗೈರಾಗಿದ್ದಾರೆ. ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಮದಾಸ್, ಶಿವನಗೌಡ ನಾಯಕ್, ಕೆ.ಜಿ.ಬೋಪಯ್ಯ ಇವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಡಿಸಿದ್ದಾರೆ. 'ನನಗೆ ಅನ್ಯಾಯ ಆಗಿದೆ. ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಹಿರಿತನ, ಪಕ್ಷನಿಷ್ಠೆ ಗುರುತಿಸಿ ಮಂತ್ರಿಗಿರಿ ನೀಡದ್ದಕ್ಕೆ ಬೇಸರವಾಗಿದೆ. ನಾನು 6 ಬಾರಿ ಶಾಸಕನಾದ್ರೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನ್ನನ್ನು ಪಕ್ಷದ ಮುಖಂಡರು ಕಡೆಗಣಿಸಿದ್ದಾರೆ. ನನಗೆ ಅನ್ಯಾಯವಾಗಿದೆ, ಕೆಲ ಶಾಸಕರು ಇಂದು ಬೆಂಗಳೂರಿನಲ್ಲಿ ಸೇರಿ ಚರ್ಚಿಸುತ್ತೇವೆ. ಬಿಎಸ್‌ವೈ, ಹೈಕಮಾಂಡ್  ಗೆ ಮನವರಿಕೆ ಮಾಡಿಕೊಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕು ಅನ್ನೋದೇ ನನ್ನ ಉದ್ದೇಶ' ಎಂದಿದ್ದಾರೆ.

ಇನ್ನೂ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, ನಾನು ಬಿಜೆಪಿ ಸೇರಿ ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com