ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಬಿಜೆಪಿ ಶಾಸಕರ ರಹಸ್ಯ ಸಭೆ, ಬಂಡಾಯದ ಕಹಳೆ ಸೂಚನೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯದ ಕಹಳೆ ಮೊಳಗಿದೆ. ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ಶಾಸಕರು ಖಾಸಗಿ ಹೋಟೆಲ್ ವೊಂದರಲ್ಲಿ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.
ಅಸಮಾಧಾನಿತ ಶಾಸಕರು
ಅಸಮಾಧಾನಿತ ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯದ ಕಹಳೆ ಮೊಳಗಿದೆ. ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ಶಾಸಕರು ಖಾಸಗಿ ಹೋಟೆಲ್ ವೊಂದರಲ್ಲಿ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಸಚಿವ ಸ್ಥಾನ ವಂಚಿತ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಎಂ. ಪಿ. ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಮಾಜಿ ಶಾಸಕರಾದ  ಶ್ರೀಮಂತ ಪಾಟೀಲ್, ಕಿರಣ್ ಪಾಟೀಲ್  ಸಭೆ ಸೇರಿ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.

ಈ ಕುರಿತು  ಸ್ಪಷ್ಟನೆ ನೀಡಿದ ಎಲ್ಲಾ ಶಾಸಕರು, ಊಟಕ್ಕಾಗಿ ರೇಸ್ ವ್ಯೂ ಹೊಟೇಲ್ ಗೆ ಬಂದಿದ್ದೇವು. ತಮಗೆ ಯಾವುದೇ ಅತೃಪ್ತಿ, ಅಸಮಾಧಾನ ಇಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com