ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ

ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

Published: 21st August 2019 02:44 PM  |   Last Updated: 21st August 2019 02:44 PM   |  A+A-


cm-bsy

ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದ ಸಿಎಂ

Posted By : Lingaraj Badiger
Source : UNI

ಬೆಂಗಳೂರು: ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇನೆ. ಈಗ ವಿಧಾನಸೌಧಕ್ಕೆ ತೆರಳಿ ಹಲವು ಸಭೆಗಳಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೋಗಬೇಕಾಗಿದೆ. ಸಾಧ್ಯವಾದರೆ ಇಂದೇ ಹೋಗುತ್ತೇನೆ, ಇಲ್ಲದಿದ್ದರೆ ನಾಳೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ ಸಿಎಂ, ನಾಳೆ ಅಥವಾ ನಾಡಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವೇಳೆ ಮಾತನಾಡಿದ ನೂತನ ಸಚಿವ ಆರ್. ಅಶೋಕ್, ನಾಳೆಯೊಳಗೆ ಖಾತೆ ಹಂಚಿಕೆ ಆಗಬಹುದು. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದರು.

ನಿನ್ನೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಈಗಾಗಲೇ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ನೂತನ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನೂತನ ಸಚಿವರಲ್ಲಿ ಮುಖ್ಯಮಂತ್ರಿಯಾದವರು, ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದವರು ಹಾಗೂ ಅಪಾರ ಅನುಭವ ಹೊಂದಿರುವವರು ಕೂಡ ಇದ್ದಾರೆ. ಇವೆಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡು ಯಡಿಯೂರಪ್ಪ ಖಾತೆ ಹಂಚಿಕೆ ಮಾಡಲು ನಿರ್ಧರಿಸಿದ್ದಾರೆ.

ಪ್ರಮುಖ ಖಾತೆಯ ಮೇಲೆ ಹಿರಿಯರು ಕಣ್ಣಿಟ್ಟಿದ್ದರೂ ಯಾರು ಕೂಡ ಬಾಯ್ಬಿಟ್ಟು ಇಂತಹದೇ ಖಾತೆ ನೀಡಬೇಕು ಎಂಬ ಬೇಡಿಕೆ ಇಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ಸುಗಮವಾಗಿ ನಡೆಯಲಿದೆ ಎಂಬ ವಿಶ್ವಾಸ ಯಡಿಯೂರಪ್ಪ ಅವರಿಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಡಾ.ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸ್ವಾಮೀಜಿಗಳಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿ ಗೌರವಿಸಿದರು.

ಸ್ವಾಮೀಜಿಯವರು ಕೂಡ ಮುಖ್ಯಮಂತ್ರಿಯವರಿಗೆ ಶಾಲು ಹೊದಿಸಿ ಅಭಿನಂದಿಸಿದರು.

Stay up to date on all the latest ರಾಜಕೀಯ news
Poll
Defence minister Rajanath Singh

101 ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ನಿರ್ಬಂಧ ಹೇರುವ ಭಾರತದ ಕ್ರಮವು, ದೇಶೀಯ ಶಸ್ತ್ರಾಸ್ತ್ರ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆಯೆ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp