ಅನರ್ಹ ಕಾಂಗ್ರೆಸ್, ಜೆಡಿಎಸ್ ಶಾಸಕರು ಯಡಿಯೂರಪ್ಪ ಸಂಪುಟ ಸೇರಬೇಕು: ವಿ. ಶ್ರೀನಿವಾಸ್ ಪ್ರಸಾದ್ 

ಮೈತ್ರಿ ಸರ್ಕಾರ ಪತನಗೊಳಿಸಿದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನರ್ಹ ಶಾಸಕರನ್ನು ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಂಸದ ವಿ. ಶ್ರೀನಿವಾಸ್ ಪ್ರಸಾದ್  ಅಭಿಪ್ರಾಯಪಟ್ಟಿದ್ದಾರೆ.
ವಿ. ಶ್ರೀನಿವಾಸ್ ಪ್ರಸಾದ್
ವಿ. ಶ್ರೀನಿವಾಸ್ ಪ್ರಸಾದ್

ಮೈಸೂರು: ಮೈತ್ರಿ ಸರ್ಕಾರ ಪತನಗೊಳಿಸಿದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅನರ್ಹ ಶಾಸಕರನ್ನು ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಸಂಸದ ವಿ. ಶ್ರೀನಿವಾಸ್ ಪ್ರಸಾದ್  ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಶಾಸಕರು ಸ್ವ ಇಚ್ಛೆಯಿಂದ ತಮ್ಮ ಪಕ್ಷಗಳಿಂದ ಹೊರಬಂದಿದ್ದು, ಈಗ ಬಿಜೆಪಿಯ ಭಾಗವಾಗಲಿದ್ದಾರೆ. ಪಕ್ಷದ ಚಿಹ್ನೆಯಡಿ ಉಪ ಚುನಾವಣೆ ಎದುರಿಸಬೇಕಾಗಿದೆ. ಅವರನ್ನು ಮೂಲ ಬಿಜೆಪಿ ಅಥವಾ ವಲಸಿಗ ಎಂದು ಯಾವುದೇ ತಾರತಮ್ಯ ಮಾಡಬಾರದು ಎಂದು ಸಲಹೆ ನೀಡಿದರು.

ಅನರ್ಹಗೊಂಡಿರುವ ಶಾಸಕರ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟಗೊಂಡ ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಿದೆ. ಈಗ ಅರ್ಧ ಸಂಪುಟ ರಚನೆಯಾಗಿದೆ. ಮುಂದಿನ ಹಂತದಲ್ಲಿ ಇನ್ನುಳಿದ ಸಚಿವ ಸ್ಥಾನಗಳಿಗೆ ನೇಮಕ ನಡೆಯಲಿದೆ. ಆ ಸಂದರ್ಭದಲ್ಲಿ ಅನರ್ಹ ಶಾಸಕರನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಅಸಮತೋಲನವಿದೆ ಎಂಬ ಆರೋಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಇದು ನಿಜ, ಆದರೆ, ಮುಂದಿನ  ಸಂಪುಟ ವಿಸ್ತರಣೆಯಲ್ಲಿ ಸರಿಪಡಿಸಲಿದ್ದಾರೆ. ಮೈಸೂರಿಗೂ ಯಾವುದೇ ಪ್ರಾತಿನಿಧ್ಯ ದೊರೆತಿಲ್ಲ .ಸಂಪುಟ ರಚನೆ ಸಂದರ್ಭದಲ್ಲಿ ಭಿನ್ನಮತ ಸಹಜ. ಯಡಿಯೂರಪ್ಪ ಅವರು ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ಕಾನೂನು ಪ್ರಕಾರ ಸಂಪುಟ ರಚನೆಯಲ್ಲಿ ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ಇದೆ. ಆದರೆ, ಈಗಿನ ಪರಿಸ್ಥಿತಿಯಲ್ಲಿ ವರಿಷ್ಠರ ಜೊತೆ ಚರ್ಚಿಸಿಯೇ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಬಂಧನ ರಾಜಕೀಯ ಪ್ರೇರಿತವಲ್ಲ. ಅವರನ್ನು ಕಾನೂನಿನಂತೆ ಬಂಧಿಸಿ, ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗುತ್ತಿದೆ. ದೇಶದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಪ್ರತಿಯೊಬ್ಬರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com