ಸಿದ್ದರಾಮಯ್ಯ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ- ಎಚ್. ಡಿ. ಕುಮಾರಸ್ವಾಮಿ 

ಮೈತ್ರಿ ಸರ್ಕಾರದ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಆರೋಪ,  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತ್ಯಾರೋಪ ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಿದ್ದರಾಮಯ್ಯ, ದೇವೇಗೌಡ
ಸಿದ್ದರಾಮಯ್ಯ, ದೇವೇಗೌಡ
Updated on: 

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಆರೋಪ,  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತ್ಯಾರೋಪ ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.  
 
ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ, ಈಗ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ  ನೀಡಿದ್ದಾರೆ.

ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ  ಉತ್ತರಿಸಲು ಇದು ಸಕಾಲವಲ್ಲ ಎಂದಿದ್ದಾರೆ. 

ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿದೆ. ಜಾತ್ಯಾತೀತ ಶಕ್ತಿಗಳು ಒಗ್ಗೂಡುವ ಇಂತಹ ಸಮಯದಲ್ಲಿ ಒಡಕಿನ ಮಾತುಗಳು ಆರೋಗ್ಯಕ್ಕರವಲ್ಲ. ಕಾಲ ಕೂಡಿ ಬಂದಾಗ ಎಲ್ಲದ್ದಕ್ಕೂ ಉತ್ತರಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com