ಸಿಎಂ ಯಡಿಯೂರಪ್ಪ ಆಪ್ತರಿಂದಲೇ ಬಿಜೆಪಿ ಸರ್ಕಾರ ಪತನ: ಸಿಎಸ್ ಪುಟ್ಟರಾಜು ಭವಿಷ್ಯ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರೇ ಸರ್ಕಾರ ಉರುಳಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಭವಿಷ್ಯ ನುಡಿದಿದ್ದಾರೆ..
Published: 23rd August 2019 01:42 PM | Last Updated: 23rd August 2019 01:42 PM | A+A A-

ಸಿ.ಎಸ್ ಪುಟ್ಟರಾಜು
ಮಂಡ್ಯ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರೇ ಸರ್ಕಾರ ಉರುಳಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಭವಿಷ್ಯ ನುಡಿದಿದ್ದಾರೆ
ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಶಾಸಕರ ವೇಗ ನೋಡಿದರೆ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಅನಿಸುತ್ತಿದೆ. ಶಾಸಕರೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ತಯಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಅತೃಪ್ತರೇ ತಿರುಗಿಬಿದ್ದಂತೆ ಬಿಜೆಪಿಯಲ್ಲೂ ಏನಾದರೂ ಆಗುವ ಸಾಧ್ಯಾಸಾಧ್ತೆ ಬಗ್ಗೆ ಪ್ರತಿಕ್ರಿಯಿಸಿ, ನಾವೇನೂ ಬಿಜೆಪಿ ನಾಯಕರಂತೆ ಬಿಜೆಪಿ ಶಾಸಕರನ್ನು ಅಪರೇಶನ್ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಉತ್ತರ ನೀಡಿದರು..
ಇದೇ ವೇಳೆ ಬೇಬಿ ಬೆಟ್ಟದ ಗಣಿಗಾರಿಕೆ ವಿಷಯದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಗಣಿಗಾರಿಕೆಗೆ ಸಂಬಂಧಿಸಿದಂತೆ ನಾವೇ ಎರಡು ತಿಂಗಳು ಕಾಲ ನಿಷೇಧಾಜ್ಞೆ ವಿಧಿಸಲಾಗಿದೆ. ಈಗ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.