ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ: ಮುರುಗೇಶ್ ನಿರಾಣಿ

ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ, ನಾನು ಇನ್ನೂ 25 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶವಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.

Published: 23rd August 2019 12:07 PM  |   Last Updated: 23rd August 2019 12:07 PM   |  A+A-


BJP MLA Murugesh Nirani

ಮುರುಗೇಶ್ ನಿರಾಣಿ

Posted By : Srinivasamurthy VN
Source : UNI

ಬೆಂಗಳೂರು: ಸಚಿವ ಸ್ಥಾನ ಸಿಗದಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ, ನಾನು ಇನ್ನೂ 25 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶವಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಜನರು ಮತ್ತು ರೈತರ ಪರವಾಗಿ ಕೆಲಸ ಮಾಡುತ್ತೇನೆ, ಸಚಿವ ಸ್ಥಾನಕ್ಕಾಗಿ ನಾನು ಲಾಬಿ ಮಾಡಿಲ್ಲ, ಮಾಡುವುದೂ ಇಲ್ಲ, ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ನೀಡಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು.

ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ನನಗೆ ಯಾವ ಅಸಮಾಧಾನವೂ ಇಲ್ಲ, ಪಕ್ಷದ ಹಿರಿಯ ನಾಯಕರು ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕೆಲವು ತೀರ್ಮಾನ ಮಾಡಿದ್ದಾರೆ, ಅದಕ್ಕೆ ನಮ್ಮ ಆಕ್ಷೇಪವಿಲ್ಲ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿದ್ದ ಮುರುಗೇಶ್ ನಿರಾಣಿಯವರನ್ನು ಮುಖ್ಯಮಂತ್ರಿ ಸಮಾಧಾನಗೊಳಿಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp