ಉಪ ಮುಖ್ಯಮಂತ್ರಿ ಹುದ್ದೆ ಖಚಿತ: ನಾಳೆ ಸಚಿವರಿಗೆ ಖಾತೆ ಹಂಚಿಕೆ: ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾಗುವುದು ಖಚಿತವಾಗಿದ್ದು, ಎಷ್ಟು ಮಂದಿ ಇರುತ್ತಾರೆ ಎಂಬುದು ಮಾತ್ರ ಸ್ಪಷ್ಟಗೊಂಡಿಲ್ಲ, ಈ ಎಲ್ಲಾ ಕುತೂಹಲಗಳಿಗೆ ನಾಳೆ ತೆರಬೀಳಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಎಸ್ ವೈ ಸುದ್ದಿಗೋಷ್ಠಿ
ಬಿಎಸ್ ವೈ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾಗುವುದು ಖಚಿತವಾಗಿದ್ದು, ಎಷ್ಟು ಮಂದಿ ಇರುತ್ತಾರೆ ಎಂಬುದು ಮಾತ್ರ ಸ್ಪಷ್ಟಗೊಂಡಿಲ್ಲ, ಈ ಎಲ್ಲಾ ಕುತೂಹಲಗಳಿಗೆ ನಾಳೆ ತೆರಬೀಳಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ, ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಾಳೆ ಪೂರ್ಣವಾಗಲಿದೆ. ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಎಷ್ಟು‌ ಮಂದಿ ಉಪಮುಖ್ಯಮಂತ್ರಿ ಇರುತ್ತಾರೆ ಎಂಬುದು‌ ತಿಳಿಯಲಿದೆ. ನಮ್ಮ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಇರುತ್ತಾರೆ. ಈ ಬಗ್ಗೆ ಹೈಕಮಾಂಡ್ ಸೂಚನೆ ನೀಡಿದ್ದು ಅದನ್ನು ಪಾಲಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಕೆಲವರಿಗೆ ಬೇಸರವಿದೆ. ಪಕ್ಷದ ವರಿಷ್ಠರ ಆದೇಶದಂತೆ‌ ಸವದಿಗೆ ಸಚಿವ ಸ್ಥಾನ ನೀಡಲಾಗಿದೆ. ಅದೇ ರೀತಿ‌ ಬೆಳಗಾವಿಯ ಮತ್ತೊಬ್ಬರಿಗೆ ಅವಕಾಶ ನೀಡಲಾಗುವುದು. ಪ್ರಧಾನಿ ಹಾಗೂ ಪಕ್ಷದ ವರಿಷ್ಠರು ನೀಡಿರುವ ಸಲಹೆ ಸೂಚನೆ ಪಾಲಿಸುತ್ತೇನೆ. ಬಿಜೆಪಿಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಜೆಡಿಎಸ್ ‌ಕಾಂಗ್ರೆಸ್ ಪಕ್ಷದಲ್ಲಿ ಸಮಸ್ಯೆ ಇದೆ. ಸಚಿವ ಸ್ಥಾನ ದೊರೆಯದವರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡಲಾಗುವುದು.

ಇತ್ತೀಚೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ. ಹೀಗಾಗಿ ರಾಜ್ಯಕ್ಕೆ ಮೊದಲು ಅಧ್ಯಯನ ತಂಡ ಕಳುಹಿಸಲಾಗಿದೆ. ತಂಡ ಈಗಾಗಲೇ ಅಧ್ಯಯನ ಪ್ರಾರಂಭಿಸಿದ್ದು, ವರದಿ ನೀಡಿದ ಬಳಿಕ ಹೆಚ್ಚಿನ ನೆರವು ಪಡೆಯಲಿದ್ದೇವೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಹುದ್ದೆ ಇರುತ್ತದೆ. ಯಾರು, ಎಷ್ಟು ಎಂಬುದು ನಾಳೆ ಗೊತ್ತಾಗುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಡಿಸಿಎಂ ಹುದ್ದೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ಸೂಚನೆಗಳನ್ನು ಪಾಲಿಸುತ್ತೇವೆ. ಎಷ್ಟು ಡಿಸಿಎಂ ಸ್ಥಾನ ಅನ್ನೊದು ಚರ್ಚೆ ನಡೆಯುತ್ತಿದೆ. ನಾಳೆ ಅಂತಿಮವಾಗಿ ಗೊತ್ತಾಗಲಿದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ಮಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಅನರ್ಹ ಶಾಸಕರ ಬಗ್ಗೆ ಮಾತನಾಡುವುದಿಲ್ಲ. ಈ ಕುರಿತು ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಈಗೇನಿದ್ದರೂ ಸಮಸ್ಯೆ ಕಾಂಗ್ರೆಸ್ ಜೆಡಿಎಸ್‍ನಲ್ಲಿ ಮಾತ್ರ ಎಂದು ಅನರ್ಹ ಶಾಸಕರ ಕುರಿತು ಬಿಎಸ್‍ವೈ ಮಾತನಾಡನಲಿಲ್ಲ. ಲಕ್ಷ್ಮಣ ಸವದಿ ಬಗ್ಗೆ ಕೆಲವು ಶಾಸಕರು ಹಾಗೂ ನಾಯಕರಲ್ಲಿ ಅಸಮಾಧಾನ ಇರುವುದು ನಿಜ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸವದಿಗೆ ಅವಕಾಶ ನೀಡಲಾಗಿದೆ. ಬೆಳಗಾವಿಯಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನಿಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com