ಮಂಗಳವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಇತ್ತೀಚಿಗಷ್ಟೇ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಗಸ್ಟ್ 27ರಂದು ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್
ಸಂಸದ ನಳಿನ್ ಕುಮಾರ್ ಕಟೀಲ್
Updated on: 

ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಗಸ್ಟ್ 27ರಂದು ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.

ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಮಂಗಳವಾರ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆಯಲಿದೆ.

ಪದಗ್ರಹಣ ಸಮಾರಂಭ ಭಾನುವಾರ ನಡೆಯಬೇಕಿತ್ತು. ಆದರೆ ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಮುಂದೂಡಲಾಗಿತ್ತು.

ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com