ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಮೂರು ಡಿಸಿಎಂ ಹುದ್ದೆ: ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ  ವರಿಷ್ಠರಿಗೆ ಇಷ್ಟವಿರಲಿಲ್ಲ, ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಸರ್ಕಾರದಲ್ಲಿ ಮೂರು  ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ-ಸಿದ್ದರಾಮಯ್ಯ
ಬಿಎಸ್ ಯಡಿಯೂರಪ್ಪ-ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ  ವರಿಷ್ಠರಿಗೆ ಇಷ್ಟವಿರಲಿಲ್ಲ, ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಸರ್ಕಾರದಲ್ಲಿ ಮೂರು  ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.

ಬಾಗಲಕೋಟೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಎಲ್ಲರನ್ನೂ ಸಮಾಧಾನಪಡಿಸಲು ಡಿಸಿಎಂ ಹುದ್ದೆ ಸೃಷ್ಟಿ ಮಾಡಲಾಗಿದೆ. ಉಪ  ಮುಖ್ಯಮಂತ್ರಿ ಹುದ್ದೆ ಸಂವಿಧಾನಬದ್ಧ ಹುದ್ದೆಯಲ್ಲ. ಅದಕ್ಕೆ ಯಾವುದೇ ಮಹತ್ವವಿಲ್ಲ ಹಾಗೂ  ಯಾವುದೇ ಅಧಿಕಾರ ಕೂಡ ಇಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರನ್ನು  ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ಚುನಾವಣೆಗೆ ಹೋಗಲು  ಬಿಜೆಪಿ ವರಿಷ್ಠರು ನಿರ್ಧರಿಸಿದ್ದರು. ಆದರೆ ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರನ್ನು  ಗೋಗರೆದು ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದ ಅವರು, ಸರ್ಕಾರ ಹೆಚ್ಚು ದಿನ  ಇರುವುದಿಲ್ಲ, ನಮಗೆ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಲು ಇಷ್ಟವಿಲ್ಲ, ಈ ಬಗ್ಗೆ ಹೇಳಿಕೆ  ಕೂಡ ಕೊಡಲು ಇಷ್ಟವಿಲ್ಲ, ಅಸಮಾಧಾನ ಸ್ಫೋಟಗೊಂಡು ಸರ್ಕಾರ ಸಂಕಷ್ಟಕ್ಕೆ ಸಿಲುಕಲಿದೆ  ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com