ಡಿಕೆ ಶಿವಕುಮಾರ್‌ಗೆ ಸಂಕಷ್ಟ: ಇಡಿ ಸಮನ್ಸ್ ವಿರುದ್ಧದ ಅರ್ಜಿ ವಜಾ, ಟ್ರಬಲ್ ಶೂಟರ್‌ಗೆ ಬಂಧನ ಭೀತಿ?

ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಸಮನ್ಸ್ ಪ್ರಶ್ನಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು ಈ ಮೂಲಕ ಇಡಿ ವಿಚಾರಣೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಸಮನ್ಸ್ ಪ್ರಶ್ನಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು ಈ ಮೂಲಕ ಇಡಿ ವಿಚಾರಣೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಇಡಿ ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದು ಪಡಿಸಬೇಕು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಂತರ ಇದೀಗ ನ್ಯಾ. ಅರವಿಂದ್ ಕುಮಾರ್ ಇಂದು ಆದೇಶ ಪ್ರಕಟಿಸಿದ್ದಾರೆ. 

2017ರ ಆಗಸ್ಟ್ 2ರಂದು ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ದಾಖಲೆ ಇಲ್ಲದ 8.59 ಕೋಟಿ ರುಪಾಯಿಯನ್ನು ಪತ್ತೆ ಮಾಡಿತ್ತು. ಇನ್ನು ವಿಚಾರಣೆ ವೇಳೆ ಡಿಕೆಶಿ ಸುಳ್ಲು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. 

ಅಪಾರ್ಟ್ ಮೆಂಟ್ ನಲ್ಲಿ ಪತ್ತೆ ಹಣದ ಜತೆಗೆ ಹವಾಲಾ ಮೂಲಕ ಏಜೆಂಟ್ ಗಳ ಸಹಾಯದಿಂದ ಡಿಕೆ ಶಿವಕುಮಾರ್ ಸಾವಿರಾರು ಕೋಟಿ ರೂಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇನ್ನು ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com