ಉಸಿರಾಡಲೂ ಬಿಡ್ತಿಲ್ಲ, ತಿಂಗಳಲ್ಲಿ 30 ನೋಟಿಸ್: ಐಟಿ ಅಧಿಕಾರಿಗಳ ವಿರುದ್ಧ ಡಿಕೆಶಿ ಅಸಮಾಧಾನ!

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತೆ ಐಟಿ ಇಲಾಖೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಉಸಿರಾಡಲೂ ಬಿಡುತ್ತಿಲ್ಲ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತೆ ಐಟಿ ಇಲಾಖೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಉಸಿರಾಡಲೂ ಬಿಡುತ್ತಿಲ್ಲ ಎಂದು ಹೇಳಿದ್ದಾರೆ.

ಉಪ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರು, ಐಟಿ ಆಧಿಕಾರಿಗಳ ನೋಟಿಸ್ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಐಟಿ ಇಲಾಖೆಯವರು ನೋಟಿಸ್ ಮೇಲೆ ನೋಟಿಸ್ ನೀಡುತ್ತಿದ್ದಾರೆ. ಅವರು ಉಸಿರಾಡಲೂ ಬಿಡುತ್ತಿಲ್ಲ ಏನ್ ಮಾಡೋಣ ಎಂದು ಪ್ರಶ್ನೆ ಮಾಡಿದ್ದಾರೆ.

'ಉಸಿರಾಡಲು ಅವಕಾಶ ನೀಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದೇವೆ. ತಕ್ಷಣವೇ ಅಸೆಸ್ಸಮೆಂಟ್ ಆರ್ಡರ್ ಮಾಡಬೇಕೆಂದು ಹೇಳುತ್ತಿದ್ದಾರೆ. ಈಗ ಬೆಂಗಳೂರಿಗೆ ಹೋಗಿ ಅಧಿಕಾರಿಗಳನ್ನು ಭೇಟಿಯಾಗುತ್ತೇನೆ. ಎಲ್ಲರ ಫೈನಲ್ ರಿಪೋರ್ಟ್ ಅನ್ನು ನಮ್ಮ ಅಧಿಕಾರಿಗಳು ಸಿದ್ಧಗೊಳಿಸುತ್ತಿದ್ದಾರೆ. ಕಾನೂನು ಅವರ ಕೈಯಲ್ಲಿದ್ದು, ಏನ್ ಬೇಕಾದ್ರೂ ಮಾಡಬಹುದು. ಕಾಗವಾಡಕ್ಕೆ ಹೆಲಿಕಾಪ್ಟರ್ ನಲ್ಲಿ ಹೋಗಲು ಅನುಮತಿಯನ್ನ ನೀಡಲಿಲ್ಲ. ಸಂಜೆ ಅನುಮತಿಯನ್ನು ನೀಡುತ್ತೇವೆ ಎಂದು ಹೇಳ್ತಿದ್ದಾರೆ. ಅಧಿಕಾರ ಅವರ ಕೈಯಲ್ಲಿದೆ ಅಲ್ವಾ ಎಂದು ಪ್ರಶ್ನೆ ಮಾಡಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಈ ತಿಂಗಳ ಕೊನೆಯೊಳಗೆ ಅಂತಿಮ ಹೇಳಿಕೆ (ಫೈನಲ್ ಸ್ಟೇಟ್‍ಮೆಂಟ್) ದಾಖಲು ಮಾಡಬೇಕು ಎಂದು ಐಟಿ ಇಲಾಖೆ ನೋಟಿಸ್ ನಲ್ಲಿ ಸೂಚಿಸಿದೆ ಎನ್ನಲಾಗಿದೆ.  ಐಟಿ ದಾಳಿಗೆ ಒಳಗಾದ ವ್ಯಕ್ತಿ ಆದಾಯವನ್ನು ಘೋಷಿಸಿಕೊಳ್ಳಲು ಒಂದು ವರ್ಷದ ಕಾಲಾವಕಾಶ ನೀಡಲಾಗುತ್ತದೆ. ಅದೇ ರೀತಿ ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದ್ದ ಅವಧಿ ಡಿಸೆಂಬರ್ 31ಕ್ಕೆ ಕೊನೆಯಾಗಲಿದೆ. 

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬಸ್ಥರಿಗೆ ಐಟಿ ಇಲಾಖೆ ನೋಟಿಸ್ ನೀಡಿದೆ. ಸೂಕ್ತ ಸಮಯದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಐಟಿ ಇಲಾಕೆ ಎಚ್ಚರಿಕೆಯನ್ನು ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com