ಪ್ರಚಾರಕ್ಕೆ ಕೇವಲ ಎರಡೇ ದಿನ:  ತಡರಾತ್ರಿವರೆಗೂ ಘಟಾನುಘಟಿಗಳ ಪ್ರಚಾರ

ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗಾಗಿ ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಕೇವಲ ರಾಜಕೀಯ ಪಕ್ಷಗಳು ಮಾತ್ರವಲ್ಲ ಚುನಾವಣಾ ಆಯೋಗ ಕೂಡ ತುಂಬಾ ಸ್ಟ್ರಿಕ್ಟ್ ಆಗಿದೆ,  ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಭಾನುವಾರ  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು.  ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಎಚ್,ಡಿ ಕುಮಾರಸ್ವಾಮಿ ಗೋಕಾಕ್ ಮತ್ತು ಅಥಣಿಯಲ್ಲಿ ಪ್ರಚಾರ ನಡೆಸಿದ್ದಾರೆ. ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡ ಶಿವಾಜಿನಗರ ಮತ್ತು ಯಶವಂತಪುರದಲ್ಲಿ ಪ್ರಚಾರ ನಡೆಸಿದರು.

ಭಾನುವಾರ ರಾತ್ರಿಯವರೆಗೂ ಎಲ್ಲಾ ಪಕ್ಷಗಳು ಪ್ರಚಾರದಲ್ಲಿ ನಿರತರಾಗಿದ್ದವು, ಬಿಜೆಪಿ ಕೂಡ ಎಲ್ಲಾ 15 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇನ್ನೂ ಡಿಸೆಂಬರ್ 9 ರ ನಂತರ ರಾಜ್ಯರಾಜಕೀಯ ಚಿತ್ರಣವೇ ಬದಲಾಗುತ್ತದೆ,ಸ್ವಲ್ಪ ದಿನ ಕಾದು ನೋಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.  ಮತ್ತೊಂದೆಡೆ  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ  ಬಿಜೆಪಿ ಸರ್ಕಾರಕ್ಕೆ ಯಾವುದೇ ಬೆದರಿಕೆಯಿಲ್ಲ ಎಂದು ಹೇಳಿದ್ದಾರೆ, ಇನ್ನ ಕೇವಲ ಎರಡು ದಿನ ಮಾತ್ರ ಪ್ರಚಾರಕ್ಕೆ ಬಾಕಿಯಿದೆ, ಹೀಗಾಗಿ ಎಲ್ಲಾ ಪಕ್ಷಗಳು ತಮ್ಮ ಸಾಂಪ್ರದಾಯಿತ ಮತ ಬ್ಯಾಂಕ್ ಸೆಳೆಯಲು ಮುಂದಾಗಿದ್ದಾರೆ.                                                                        

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com