ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಎಚ್ ಡಿಕೆ, ಡಿಕೆಶಿ ಭೇಟಿ, ಮರು ಮೈತ್ರಿ ವದಂತಿಗೆ ಪುಷ್ಠಿ

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಸೋಮವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷಿತವಾಗಿ ಭೇಟಿ ಮಾಡಿದ್ದು,  ಕಾಂಗ್ರೆಸ್ - ಜೆಡಿಎಸ್ ಮರು ಮೈತ್ರಿಯ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಎಚ್ ಡಿ ಕುಮಾರಸ್ವಾಮಿ - ಡಿಕೆ ಶಿವಕುಮಾರ್
ಎಚ್ ಡಿ ಕುಮಾರಸ್ವಾಮಿ - ಡಿಕೆ ಶಿವಕುಮಾರ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಸೋಮವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅನಿರೀಕ್ಷಿತವಾಗಿ ಭೇಟಿ ಮಾಡಿದ್ದು,  ಕಾಂಗ್ರೆಸ್ - ಜೆಡಿಎಸ್ ಮರು ಮೈತ್ರಿಯ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಇಂದು ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಹುಬ್ಬಳ್ಳಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಇದೇ ವೇಳೆ ಬೆಂಗಳೂರಿಗೆ ತೆರಳುತ್ತಿದ್ದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಇಬ್ಬರೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದರು.

ಈ ವೇಳೆ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ವಿಮಾನ ನಿಲ್ದಾಣದ ವಿಐಪಿ ಲಾಂಜ್ ನಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಇಬ್ಬರೂ ತಾವು ತೆರಳಬೇಕಿದ್ದ ನಗರಕ್ಕೆ ತೆರಳಿದರು. ಆದರೆ ಮಾತುಕತೆಯ ವಿವರ ಮಾತ್ರ ಬಹಿರಂಗಪಡಿಸಿಲ್ಲ. 

ಡಿಸೆಂಬರ್ 9ರಂದು ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶದ ಬಳಿಕ ಒಂದು ವೇಳೆ ಬಿಜೆಪಿ ಸ್ಪಷ್ಟ ಬಹುಮತಕ್ಕೆ ಬೇಕಾದ ಸ್ಥಾನಗಳನ್ನು ಗೆಲ್ಲದಿದ್ದರೆ ಮತ್ತೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿಮಾಡಿಕೊಳ್ಳುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com