ಡಿಸೆಂಬರ್ 9ರಂದು ಬಿಜೆಪಿ ಸೇರುವ ಕಾಂಗ್ರೆಸ್, ಜೆಡಿಎಸ್ ಶಾಸಕರ ಪಟ್ಟಿ ಬಿಡುಗಡೆ: ಅರವಿಂದ್ ಲಿಂಬಾವಳಿ

ಉಪ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಇನ್ನಷ್ಟು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆಯಾಗುವವರ ಪಟ್ಟಿಯನ್ನು ಫಲಿತಾಂಶದ ದಿನ ಬಿಡುಗಡೆ ಮಾಡಲಾಗುವುದು....

Published: 03rd December 2019 04:46 PM  |   Last Updated: 03rd December 2019 04:46 PM   |  A+A-


Arvind Limbavali

ಅರವಿಂದ ಲಿಂಬಾವಳಿ

Posted By : Lingaraj Badiger
Source : UNI

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಇನ್ನಷ್ಟು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆಯಾಗುವವರ ಪಟ್ಟಿಯನ್ನು ಫಲಿತಾಂಶದ ದಿನ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ. 105 ಮತ್ತು ಓರ್ವ ಪಕ್ಷೇತರ ಶಾಸಕರ ಬೆಂಬಲ ಈಗಾಗಲೇ ಸರ್ಕಾರಕ್ಕಿದೆ. ಡಿಸೆಂಬರ್ 9 ರ ಬಳಿಕ ಏಕ‌ಪಕ್ಷದ ಸುಭದ್ರ ಸರ್ಕಾರ ರಚನೆಯಾಗಲಿದೆ. 15 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವಂತಹ ವಿಶ್ವಾಸ ಇದೆ ಎಂದರು.

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚನೆ ಬಳಿಕ ರಾಜ್ಯದಲ್ಲೂ ಜೆಡಿಎಸ್-ಕಾಂಗ್ರೆಸ್, ಮತ್ತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಿಜೆಪಿಗೆ ಕಡಿಮೆ ಸ್ಥಾನ ಬಂದರೆ ಮೈತ್ರಿ ‌ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ‌ ಸರ್ಕಾರ ಬೀಳಿಸಲು ಬಿಡಲ್ಲ ಎಂದು ಜೆಡಿಎಸ್ ವರಿಷ್ಠರು ಹೇಳಿಕೆ ನೀಡಿದ್ದಾರೆ. ಹೀಗೆ ಗೊಂದಲಕಾರಿ ಹೇಳಿಕೆ ನೀಡಿ ಜನರನ್ನು ದಾರಿ‌ತಪ್ಪಿಸುವ ಯತ್ನ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

Stay up to date on all the latest ರಾಜಕೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp