ಸಿದ್ದರಾಮಯ್ಯ
ಸಿದ್ದರಾಮಯ್ಯ

ಜೆಡಿಎಸ್ ನೊಂದಿಗೆ ಯಾವುದೇ ಒಳ ಒಪ್ಪಂದವಿಲ್ಲ- ಸಿದ್ದರಾಮಯ್ಯ ಸ್ಪಷ್ಟನೆ

ಜೆಡಿಎಸ್ ನೊಂದಿಗೆ ಯಾವುದೇ ಒಳ ಒಪ್ಪಂದ ವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ. 

ಮೈಸೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ  ಅಂತಿಮ ಚರಣದ ಪ್ರಚಾರ ನಡೆಸುತ್ತಿದ್ದಾರೆ.

ಹುಣಸೂರಿನಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇವರಿಗೆ ಮಾಜಿ ಸಚಿವ ಯುಟಿ ಖಾದರ್, ಮಾಜಿ ಸಂಸದ ಧ್ರುವ ನಾರಾಯಣ್ ಮತ್ತಿತರರು ಸಾಥ್ ನೀಡುತ್ತಿದ್ದಾರೆ.

ಇದಕ್ಕೂ ಮುನ್ನ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಚಾರವನ್ನು ಅಲ್ಲಗಳೆದರು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ತಗೆ ಡಿಸೆಂಬರ್ 9ರ ಬಳಿಕ ಸಿಹಿ ಹಂಚುತ್ತಾರೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ. ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರ್ಥ. ಇದನ್ನು ನೀವು ಬೇಕಾದ ರೀತಿಯಲ್ಲಿ ಅರ್ಥಮಾಡಿಕೊಳ್ಳಿ ಎಂದು ಪರ್ತಕರ್ತರಿಗೆ ಸಲಹೆ ನೀಡಿದರು.

ಬಿಜೆಪಿಯಷ್ಟೆ ಜೆಡಿಎಸ್ ಸಹ ನಮಗೆ ರಾಜಕೀಯ  ವೈರಿ. ನಾವು ಈ ಚುನಾವಣೆಯನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಎರಡು  ಪಕ್ಷಗಳು ಈ ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಜೆಡಿಎಸ್‌ನೊಂದಿಗೆ ಯಾವುದೇ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 

Related Stories

No stories found.

Advertisement

X
Kannada Prabha
www.kannadaprabha.com