ಕೆಲವೆಡೆ ಕೈಕೊಟ್ಟ ವಿದ್ಯುನ್ಮಾನ ಮತಯಂತ್ರ: ಹಕ್ಕು ಚಲಾವಣೆ ವಿಳಂಬ

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಗತಿಯಲ್ಲಿದ್ದು, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಆದರೆ ಕೆಲವೆಡೆ ವಿದ್ಯುನ್ಮಾನ ಮತ ಯಂತ್ರ ಕೈಕೊಟ್ಟಿರುವ ಘಟನೆ ನಡೆದಿದೆ. ಇದರಿಂದ ಮತದಾನ ಸ್ವಲ್ಪ ಹೊತ್ತು ವಿಳಂಬವಾಗಿತ್ತು.

Published: 05th December 2019 12:15 PM  |   Last Updated: 05th December 2019 12:15 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಗತಿಯಲ್ಲಿದ್ದು, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಆದರೆ ಕೆಲವೆಡೆ ವಿದ್ಯುನ್ಮಾನ ಮತ ಯಂತ್ರ ಕೈಕೊಟ್ಟಿರುವ ಘಟನೆ ನಡೆದಿದೆ. ಇದರಿಂದ ಮತದಾನ ಸ್ವಲ್ಪ ಹೊತ್ತು ವಿಳಂಬವಾಗಿತ್ತು.

ಹೊಸಕೋಟೆಯ ಭುವನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 49ರ ವಿದ್ಯುನ್ಮಾನ ಮತಯಂತ್ರದಲ್ಲಿ ದೋಷ ಕಂಡುಬಂದಿತ್ತು. ಇದರಿಂದ ಒಂದು ಗಂಟೆ ಕಾಲ ಮತದಾನ ಸ್ಥಗತಿಗೊಂಡಿತ್ತು. ಇದರಿಂದ ಮತದಾನಕ್ಕೆ ಬಂದ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದ ದೃಶ್ಯ ಕಂಡುಬಂತು. ಮಾತ್ರವಲ್ಲ ಸಾರ್ವಜನಿಕರು ಚುನಾವಣಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಯಂತ್ರವನ್ನು ಸರಿಪಡಿಸಿದರು. ಬಳಿಕ ಮತದಾನ ಆರಂಭಗೊಂಡಿತು.

Stay up to date on all the latest ರಾಜಕೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp