ಒಂದು ವೇಳೆ ಅನರ್ಹ ಶಾಸಕರು ಸೋತರೇ ಮಂತ್ರಿಯಾಗಲ್ಲ: ಈಶ್ವರಪ್ಪ ಸ್ಪಷ್ಟನೆ

ರಾಜ್ಯದ ಅತಂತ್ರ ರಾಜಕಾರಣಕ್ಕೆ ಡಿಸೆಂಬರ್ 9ರಂದು ಮುಕ್ತಿ ಸಿಗಲಿದೆ. ಅಭಿವೃದ್ಧಿ ದೃಷ್ಟಿಯಿಂದ ಮೂರೂವರೇ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್....
ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ

ಬೆಂಗಳೂರು: ರಾಜ್ಯದ ಅತಂತ್ರ ರಾಜಕಾರಣಕ್ಕೆ ಡಿಸೆಂಬರ್ 9ರಂದು ಮುಕ್ತಿ ಸಿಗಲಿದೆ. ಅಭಿವೃದ್ಧಿ ದೃಷ್ಟಿಯಿಂದ ಮೂರೂವರೇ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಬೇಕು ಎಂಬುದು ಜನರ ಅಭಿಪ್ರಾಯ ಕೂಡ ಆಗಿತ್ತು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದುವರಿಯಲಿದೆ. ಉಪ ಚುನಾವಣೆ ನಡೆದ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನರ್ಹರು ರಾಜೀನಾಮೆ ಕೊಡದಿದ್ದರೆ ನಮ್ಮ ಸರ್ಕಾರ ಬರುತ್ತಿರಲಿಲ್ಲ. ಹೀಗಾಗಿ ಅವರ ಋಣ ತೀರಿಸಬೇಕಿದೆ. ಯಾವುದೇ ಕಾರಣಕ್ಕೂ ಅವರಿಗೆ ನಾವು ಅನ್ಯಾಯ ಮಾಡುವುದಿಲ್ಲ. ಗೆದ್ದ ಎಲ್ಲರನ್ನು ಮಂತ್ರಿ ಮಾಡಲಾಗುವುದು. ಆದರೆ ಸೋತವರಿಗೆ ಮಂತ್ರಿ ಸ್ಥಾನ ಸೇರಿದಂತೆ ಬೇರೆ ಏನೂ ಕೊಡಲು ಸಾಧ್ಯವಾಗುವುದಿಲ್ಲ. ಈಗಾಗಲೇ ಅವರಿಗೆ ಈ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com