ಜಾತಿ ಆಧಾರದಲ್ಲಿ ಮತ ಕೇಳಿದ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ-  ವಿ.ಎಸ್. ಉಗ್ರಪ್ಪ 

ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ,‌ ಕಾಂಗ್ರೆಸ್ ಮುಖಂಡ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.
ವಿ.ಎಸ್. ಉಗ್ರಪ್ಪ
ವಿ.ಎಸ್. ಉಗ್ರಪ್ಪ

ಬೆಂಗಳೂರು: ಇತ್ತೀಚೆಗೆ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವೀರಶೈವರ ಹೆಸರಿನಲ್ಲಿ ಮತ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿರುವ ಕಾನೂನು ಸಚಿವ ಜೆ.ಸಿ. ಮಾಧು ಸ್ವಾಮಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಸಂಸದ,‌ ಕಾಂಗ್ರೆಸ್ ಮುಖಂಡ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗ ನಿಜವಾಗಿಯೂ ಜೀವಂತವಾಗಿ ಇರುವುದೇ ಆಗಿದ್ದ ತಕ್ಷಣವೇ ಮಾಧುಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆಯೋಗ ಜೀವಂತವಾಗಿರುವ ಬಗ್ಗೆ ತಮಗೆ ವಿಶ್ವಾಸವಿಲ್ಲ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಚಿವರಾಗಿ ಮಾಧುಸ್ವಾಮಿ ಜಾತಿ ಹೆಸರಿನಲ್ಲಿ ಮತ ಕೇಳುವುದು ತಪ್ಪಲ್ಲ ಎನ್ನುತ್ತಾರೆ ಎಂದಾದರೆ ಅವರು ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಜಾತಿ ಆಧಾರದ ಮೇಲೆ ಮತ ಕೇಳಿದ್ದಕ್ಕೆ ಕಾನೂನಿನ‌ ಪ್ರಕಾರ ಮೂರು ವರ್ಷ ಜೈಲು ಶಿಕ್ಷೆ ಆಗುತ್ತದೆ. ಕಾನೂನು ಸಚಿವರಿಗೆ ಕಾನೂನಿನ ಬಗ್ಗೆ ಜ್ಞಾನವೇ ಇಲ್ಲ‌ .ಕಾನೂನು ಸಚಿವರ ಕಾನೂನು ಉಲ್ಲಂಘನೆಯನ್ನು ರಾಜ್ಯಪಾಲರು  ಗಮನಿಸಿಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com